ಪಡಿತರ ಅಂಗಡಿಗಳಲ್ಲಿ ಸಿಗಲಿದೆ ಸೀಮೆಎಣ್ಣೆ: ಗ್ರಾಮೀಣ ಭಾಗದಲ್ಲಿ 45 ದಿನಕ್ಕೆ ಒಂದು ಸಿಲಿಂಡರ್‌

ನವದೆಹಲಿ

ಸುದ್ದಿ ಸಂಗ್ರಹ ನವದೆಹಲಿ
ಭಾರತದಲ್ಲಿ ಮತ್ತೆ ಮನೆಯ ಅಡುಗೆಗೆ ಸೀಮೆಎಣ್ಣೆ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಗುರುವಾರ ರಾಜ್ಯಗಳಿಗೆ ಕೇಂದ್ರ 1 ಲಕ್ಷ ಕಿಲೋಲೀಟರ್‌ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು ಹಂಚಿಕೆ ಮಾಡಿದೆ. ಪ್ರಾಥಮಿಕವಾಗಿ ಪಡಿತರ ಅಂಗಡಿಗಳ ಮೂಲಕ ಸೀಮೆಎಣ್ಣೆ ವಿತರಿಸಲಾಗುತ್ತದೆ.

ಹೋಟೆಲ್‌, ರೆಸ್ಟೋರೆಂಟ್‌ಗಳು ಪರ್ಯಾಯ ಇಂಧನವಾಗಿ ಬಯೋಮಾಸ್, ಆರ್‌ಡಿಎಫ್ ಪೆಲೆಟ್‌ಗಳು ಮತ್ತು ಕಲ್ಲಿದ್ದಲನ್ನು ಒಂದು ತಿಂಗಳ ಕಾಲ ಬಳಸಲು ಅನುಮತಿ ನೀಡುವಂತೆ ಪರಿಸರ ಸಂಸ್ಥೆಗಳನ್ನು ಕೇಳಿದೆ.

ಸೀಮೆಎಣ್ಣೆಯ ಬದಲು ಅಡುಗೆಗೆ ಎಲ್‌ಪಿಜಿ ಬಳಸುವ ಅಭಿಯಾನ 2012 ರಲ್ಲಿ ಆರಂಭವಾಗಿತ್ತು. ಈಗ ಉಜ್ವಲ ಯೋಜನೆಯ ಅಡಿ ಬಡ ಕುಟುಂಬಕ್ಕೆ ಸರ್ಕಾರ ಸಬ್ಸಿಡಿ ದರದಲ್ಲಿ ಸಿಲಿಂಡರ್‌ ನೀಡುತ್ತಿದೆ.

ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆ ಹೆಚ್ಚಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ಬುಕ್ಕಿಂಗ್‌ ಅವಧಿಯನ್ನು ಏರಿಸಲಾಗಿದೆ. ಮೊದಲು 25 ದಿನಕ್ಕೆ ಒಂದು ಸಿಲಿಂಡರ್‌ ಸಿಗುತ್ತಿತ್ತು. ಇನ್ನು ಮುಂದೆ 45 ದಿನಗಳಿಗೊಮ್ಮೆ ಸಿಲಿಂಡರ್‌ ಸಿಗಲಿದೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ (ಮಾರುಕಟ್ಟೆ) ಸುಜಾತಾ ಶರ್ಮಾ ಪ್ರತಿಕ್ರಿಯಿಸಿ, ದೇಶವು ಹಿಂದೆಂದೂ ಈ ರೀತಿಯ ಪರಿಸ್ಥಿತಿಯನ್ನು ನೋಡಿರಲಿಲ್ಲ. ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ನಂತರ ದೇಶೀಯ ಸರಬರಾಜುಗಳ ಮೇಲೆ ಪರಿಣಾಮ ಬೀರಿದೆ. ಗ್ರಾಮೀಣ ಗ್ರಾಹಕರು ಈಗ 45 ದಿನಗಳ ನಂತರ ಮಾತ್ರ ಸಿಲಿಂಡರ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದರು.

Leave a Reply

Your email address will not be published. Required fields are marked *