KPSC ಅಕ್ರಮ ಆರೋಪ: ಪರೀಕ್ಷಾ ನಿಯಂತ್ರಕ ಎತ್ತಂಗಡಿ

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ಕೆಪಿಎಸ್‌ಸಿ ಅಕ್ರಮ ಆರೋಪ ಬೆನ್ನಲ್ಲೆ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರಕುಮಾರ್ ಗಂಗಾವರ್ ಎತ್ತಂಗಡಿ ಮಾಡಲಾಗಿದೆ. ಆ ಸ್ಥಾನಕ್ಕೆ ದಿಗ್ವಿಜಯ್ ಬೋಡ್ಕೆ ಅವರನ್ನು ನೇಮಿಸಲಾಗಿದೆ.

ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಪದೆ ಪದೆ ಅಕ್ರಮ ಆರೋಪಗಳು ಕೇಳಿಬರುತ್ತಿದ್ದ ಹಿನ್ನೆಲೆ ಸರ್ಕಾರ ಮಹತ್ತರ ಸುಧಾರಣೆ ತಂದಿದೆ. ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲಿ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕವೂ ಪ್ರತಿ ವರ್ಷ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಈ ಬಗ್ಗೆ ವಿಧಾನಸಭೆಯಲ್ಲಿ ಸಚಿವ ಕೃಷ್ಣಬೈರೇಗೌಡ ಮಹತ್ವದ ಘೋಷಣೆ ಮಾಡಿದ್ರು. ಇಲಾಖೆಯಲ್ಲಿ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

Leave a Reply

Your email address will not be published. Required fields are marked *