ಸುದ್ದಿ ಸಂಗ್ರಹ ಬೆಂಗಳೂರು
ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 6 ರಿಂದ 4 ದಿನಗಳು ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಿಗೆ ವಿವಿಧ ದಿನಗಳಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೇಸಿಗೆ ಬಿಸಿಲು ಜೋರಿದ್ದು, ಅಂತೆಯೇ ಪೂರ್ವ ಮುಂಗಾರು ಚುರುಕಾಗುತ್ತಿದೆ. ಏಪ್ರಿಲ್ 6 ರಿಂದ 8ವರೆಗೂ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 8ರ ತನಕ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆ ತಿಳಿಸಿದೆ.
ಒಟ್ಟು 16 ಜಿಲ್ಲೆಗಳಿಗೆ ಅಲರ್ಟ್ – ಯಾವೆಲ್ಲಾ ?
- ಏಪ್ರಿಲ್ 6 – ಕಲಬುರಗಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ.
- ಏಪ್ರಿಲ್ 7 – ಕಲಬುರಗಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ.
- ಏಪ್ರಿಲ್ 8 – ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ.
ಏಪ್ರಿಲ್ 6, 7 ರಂದು ಎಲ್ಲೆಲ್ಲಿ ಅಲರ್ಟ್ ?
- ಕರಾವಳಿ ಮತ್ತು ಮಲೆನಾಡು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
- ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಗದಗ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ಇದೆ.
- ದಕ್ಷಿಣ ಒಳನಾಡು: ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಏಪ್ರಿಲ್ 8 ರಿಂದ ಏಪ್ರಿಲ್ 9 ರಂದು ಎಲ್ಲಿ ಜೋರು ಮಳೆ ?
ಮಳೆಯ ತೀವ್ರತೆಯು ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಭಾಗಗಳಲ್ಲಿ ಕಂಡುಬರಲಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ.