ಸುದ್ದಿ ಸಂಗ್ರಹ ಯಾದಗಿರಿ
ಮುಖಾಮುಖಿ ಡಿಕ್ಕಿಯಾಗಿ ಕಾರು ಮತ್ತು ಖಾಸಗಿ ಬಸ್ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.
ಕಾರಿನಲ್ಲಿದ್ದ ಆರು ಜನ ಬೆಂಕಿಯಲ್ಲಿ ಸುಟ್ಟುಹೋಗಿದ್ದಾರೆ ಎನ್ನಲಾಗಿದೆ. ಕಾರು ಯಾದಗಿರಿಯಿಂದ ರಾಯಚೂರ ಕಡೆ ಹೊರಟಿತ್ತು. ಇದೆ ವೇಳೆ ಖಾಸಗಿ ಬಸ್ ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿತ್ತು. ಆವಾಗ ಎರಡು ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಹಾಗೂ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.
ಸದ್ಯ ಸ್ಥಳಕ್ಕೆ ಸುರಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.