ಕಲಬುರಗಿ: ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

ನಗರದ

ಸುದ್ದಿ ಸಂಗ್ರಹ ಕಲಬುರಗಿ
ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್‌ ಕಾನ್‌ಸ್ಟೆಬಲ್‌ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್ (ಬಿ) ಗ್ರಾಮದ ಬಳಿ ನಡೆದಿದೆ.

ಧರೆಪ್ಪ ಅಂಜುಟಗಿ (26) ಮೃತ KSRP ಪೇದೆ. ಧರೆಪ್ಪ ಕಲಬುರಗಿಯಿಂದ ಶಿರವಾಳ್ ಗ್ರಾಮಕ್ಕೆ ಹೊರಟಿದ್ದರು. ಗೊಬ್ಬರ (ಬಿ) ಗ್ರಾಮದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಪೊಲೀಸ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ತಮ್ಮರಾಯ ಪಾಟೀಲ್, ಸಿಪಿಐ ಲಖನ್ ಮಸಗಪ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಲ ಗಾಣಗಾಪೂರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *