ನಾಳೆ SSLC ಫಲಿತಾಂಶ ಪ್ರಕಟ

ರಾಜ್ಯ

ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.

ಕೋರ್ಟ್‌ ಆದೇಶದಂತೆ ಈ ಬಾರಿ ಹಿಂದಿ ಭಾಷೆಯ ಪರೀಕ್ಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತೀರ್ಮಾನ ಮಾಡಲಾಗಿದೆ. ಹಿಂದಿಗೆ ಅಂಕ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ ಎಂದು ವಿವರಿಸಿದರು.

Leave a Reply

Your email address will not be published. Required fields are marked *