ಹೆಬ್ಬಾಳ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ಕಾಳಗಿ
2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ತಾಲೂಕಿನ ಹೆಬ್ಬಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ನೂರಕ್ಕೆ ನೂರು ಫಲಿತಾಂಶ ದಾಖಲಿಸಿ ಸಾಧನೆಗೈದಿದ್ದಾರೆ.

ಶಾಲೆಯಿಂದ ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ 28 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ‌. ಇದರಲ್ಲಿ ಒರ್ವ ವಿದ್ಯಾರ್ಥಿ ಡಿಸ್ಟಿಂಕ್ಷನ್, 13 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ, 9 ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಮತ್ತು 5 ವಿದ್ಯಾರ್ಥಿಗಳು ತೃತೀಯ ಸ್ಥಾನದಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಮುಖ ವಿದ್ಯಾರ್ಥಿಗಳ ಸಾಧನೆ
ಶುಭಲಕ್ಷ್ಮಿ ಸಿದ್ದಣ್ಣ 571 (91.36) ಅಂಕ ಗಳಿಸಿ ಶಾಲೆಗೆ ಅಗ್ರಸ್ಥಾನ ತಂದುಕೊಟ್ಟಿದ್ದಾರೆ, ಮಹೇಶ ಸೂರ್ಯಕಾಂತ 518 (82.88), ಕಾವ್ಯ ರಮೇಶ 511 (81.76), ಸಂಗೀತ ನಾಗರಾಜ 501 (80.16) ಅಂಕ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಮುಖ್ಯ ಗುರುಗಳು, ಶಿಕ್ಷಕರು, SDMC ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಗ್ರಾಮದ ಗಣ್ಯರು ಮತ್ತು ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

Leave a Reply

Your email address will not be published. Required fields are marked *