ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಜಿಲ್ಲೆ

ಸುದ್ದಿ ಸಂಗ್ರಹ ಚಿಕ್ಕಮಗಳೂರು
ಬಾತುಕೋಳಿ ಹಿಡಿಯಲು ಹೋಗಿ 5-6 ವರ್ಷದ ನಾಲ್ವರು ಮಕ್ಕಳು ನೀರು ಪಾಲಾದ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಕೆರೆಯಲ್ಲಿ ಮುಳುಗಿದ್ದ ಒಂದು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ.

ಮೃತರನ್ನು ಮಹಾದಿಯಾ, ಅರುನುಸ್, ನಾಯುಸ್ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷದ ಅರ್ಮಾನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಕ್ಕಳೆಲ್ಲ ಬಾತುಕೋಳಿ ಕೆರೆಗೆ ಹೋಯಿತು ಎಂದು ಹಿಡಿಯಲು ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆ ಮುಂಭಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *