ಸುದ್ದಿ ಸಂಗ್ರಹ ಬೆಂಗಳೂರು
ಸಚಿವ ಜಮೀರ್ ಅಹ್ಮದ್ ಮನೆಗೆ ಕನ್ನ ಹಾಕಿ ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಲ್ಲಿ ಕಳೆದ 3 ವರ್ಷದಿಂದ ಹಂತ ಹಂತವಾಗಿ ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೆ ಪದೆ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ.
ಟ್ರಾವೆಲ್ಸ್ ಬ್ಯುಸಿನೆಸ್‌ನಲ್ಲಿ ಲಾಸ್ ಆಗಿದ್ದಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಆ ಹಣ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿ ಲಾಭಕ್ಕೆ ಪ್ಲ್ಯಾನ್ ಮಾಡಿದ್ದರು. ಆದರೆ ಕಾಲ್ ಮಾಡಿದಾಗ ರಿಸೀವ್ ಮಾಡದಿದ್ದಾಗ ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದ್ದು, ಬಳಿಕ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬಯಲಿಗೆ ಬಂದಿದೆ. ಸದ್ಯ ಜಮೀರ್ ಅಹ್ಮದ್ ತಾಯಿ ನೀಡಿದ ದೂರಿನ ಮೇರೆಗೆ ಶಿವಾಜಿನಗರ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.