ಸುದ್ದಿ ಸಂಗ್ರಹ ಕಲಬುರಗಿ
ರಾಜ್ಯ ಸರಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ತಿಳಿಸಿದ್ದಾರೆ.
ಸರಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರಕಾರಿ ನೌಕರರ ಸಂಘದಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ 90ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಸರಕಾರಿ ನೌಕರರ ಮಕ್ಕಳು, ಮೇ.25ರ ಒಳಗಾಗಿ https://powermedia.info ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದರು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ತಂದೆ-ತಾಯಿ ಕರ್ನಾಟಕ ರಾಜ್ಯ ಸರಕಾರದ ಖಾಯಂ ನೌಕರರಾಗಿರಬೇಕು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಸಂಬಂಧಿಸಿದ ಜಿಲ್ಲಾ/ ತಾಲೂಕಾ ಶಾಖೆಯ ಅಧ್ಯಕ್ಷರ ರುಜು ಮತ್ತು ಮೊಹರಿನೊಂದಿಗೆ ದೃಢೀಕರಿಸಿ ಆನ್‌ಲೈನ್ ಅರ್ಜಿಗೆ ಅಪ್ಲೋಡ್ ಮಾಡಬೇಕು ಎಂದರು.