ಸುದ್ದಿ ಸಂಗ್ರಹ ಕಲಬುರಗಿ
ರಾಜ್ಯದ ಸರಕಾರಿ ನೌಕರರ ದೀರ್ಘಾಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಅಧಿಕೃತವಾಗಿ ಅನುಮೋದನೆ ನೀಡಿ ಮೂಲ ವೇತನದ ಶೇ.1.5 ರಷ್ಟು ತಟ್ಟಿಭತ್ಯೆ ಹೆಚ್ಚಳವು ಜನೆವರಿ 1 ರಿಂದ ಪೂರ್ವಾನ್ವಯವಾಗುವಂತೆ ಇತ್ತೀಚೆಗೆ ಆರ್ಥಿಕ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರಕಾರಿ ನೌಕರರ ಸಂಘದ ರಾಜಾಧ್ಯಕ್ಷ ಸಿ.ಎಸ್ ಷಡಾಕ್ಷರಿ ನೇತೃತ್ವದ ಪದಾಧಿಕಾರಿಗಳ ನಿಯೋಗ ಡಿ.ಎ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿಗೆ ಭೇಟಿ ಮಾಡಿ ಮನವಿ ಮಾಡಿತ್ತು. ಮನವಿಗೆ ಸ್ಪಂದಿಸಿರುವ ಸರಕಾರ ಈ ಮಹತ್ವದ ನಿರ್ಧಾರ ಪ್ರಕಟಿಸಿದ್ದಕ್ಕೆ ಸಂಘವು ಸ್ವಾಗತಿಸುತ್ತದೆ, ರಾಜ್ಯ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಶೇ.1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದು ಸಂತಸದ ವಿಷಯ, ಇದಕ್ಕಾಗಿ ಮುಖ್ಯಮಂತ್ರಿಗೆ, ಸರ್ಕಾರಕ್ಕೆ ಮತ್ತು ಸಂಘದ ರಾಜ್ಯಾಧ್ಯಕ್ಷ ಸಿ.ಎ ಷಡಕ್ಷರಿ ಅವರಿಗೆ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.