ಅಕ್ರಮವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳು ಹುಬ್ಬಳ್ಳಿಯಲ್ಲಿ ಲಾಕ್

ಜಿಲ್ಲೆ

ಸುದ್ದಿ ಸಂಗ್ರಹ ಹುಬ್ಬಳ್ಳಿ
ಕಾನೂನು ಬಾಹಿರವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾದೇಶದ ಪ್ರಜೆಗಳನ್ನು ಹುಬ್ಬಳ್ಳಿ ರೈಲ್ವೆ ರಕ್ಷಣಾ ಪಡೆ ಬಂಧಿಸಿದೆ.

ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಆರ್‌ಪಿಎಫ್ ಸಿಬ್ಬಂದಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ನಾಲ್ವರು ವಿದೇಶಿ ಪ್ರಜೆಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರ ಬಳಿ ಯಾವುದೆ ಗುರುತಿನ ದಾಖಲೆಗಳಿರಲಿಲ್ಲ.

ದಾಖಲೆಗಳಿಲ್ಲದಿದ್ದರೂ ನಾಲ್ವರು ವಿದೇಸಿಗರು ರೈಲಿನಲ್ಲಿ ಪ್ರಯಾಣ ಮಾಡಿ ಹುಬ್ಬಳ್ಳಿವರೆಗೆ ಬಂದಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದಿರುವ ಆರ್‌ಪಿಎಫ್ ಸಿಬ್ಬಂದಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಆರ್‌ಪಿಎಫ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ಮುಂದುವರಿದಿದೆ.

Leave a Reply

Your email address will not be published. Required fields are marked *