ಸುದ್ದಿ ಸಂಗ್ರಹ ಕಲಬುರಗಿ
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ರಾಹುಲ್ ಸಂಕನೂರ ನೇಮಕಗೊಂಡಿದ್ದಾರೆ.
2017ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿಯಾಗಿರುವ ಭಂವರ್ ಸಿಂಗ್ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ.
2019ರ ಬ್ಯಾಚ್ನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾದ ರಾಹುಲ್ ಅವರು ಸದ್ಯ ಐಟಿ- ಬಿಟಿ ಇಲಾಖೆಯ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.
ಭಂವರ್ ಸಿಂಗ್ ಮೀನಾ ಅವರನ್ನು 2023ರ ಜೂನ್ನಿಂದ ಕಲಬುರಗಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕೆಲಸ ಮಾಡುತ್ತಿದ್ದರು.