ಪ್ರಿಯಾಂಕ್ ಖರ್ಗೆಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆ

ಪಟ್ಟಣದ

ಸುದ್ದಿ ಸಂಗ್ರಹ ಚಿತ್ತಾಪುರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕ ಎಂದು ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದ ಎದುರು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.

ಘೋಷಣೆಗಳು ಕೂಗುತ್ತಾ ತಮ್ಮ ಒತ್ತಾಯ ವ್ಯಕ್ತಪಡಿಸಿದ ಮುಖಂಡರು, 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಪ್ರಿಯಾಂಕ್ ಖರ್ಗೆ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.

ಚಿತ್ತಾಪುರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪ್ರಿಯಾಂಕ್ ಖರ್ಗೆ ಅವರು ಹ್ಯಾಟ್ರಿಕ್ ಸಚಿವರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದು, ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನು ಅಳವಡಿಸಿಕೊಂಡು ಸರ್ವ ಸಮುದಾಯ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮುಖಂಡರು ಅಭಿಪ್ರಾಯಪಟ್ಟರು.

ಸಂವಿಧಾನದ ಮೌಲ್ಯಗಳ ಪರವಾಗಿ ಸದಾ ಗಟ್ಟಿ ಧ್ವನಿಯಾಗಿರುವ ಅವರು, ಆರ್‌ಎಸ್‌ಎಸ್ ಹಾಗೂ ಮನುವಾದಿ ಶಕ್ತಿಗಳ ವಿರುದ್ಧ ಸ್ಪಷ್ಟ ನಿಲುವು ಹೊಂದಿದ್ದಾರೆ. ಬಿಜೆಪಿಯ ಹಲವು ಹಗರಣಗಳನ್ನು ದಾಖಲೆ ಸಮೇತ ಬಯಲಿಗೆಳೆದ ನಾಯಕ ಪ್ರಿಯಾಂಕ್ ಖರ್ಗೆ ಎಂದರು.

ಪ್ರಿಯಾಂಕ್ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ದಕ್ಷ ಹಾಗೂ ದೃಢ ನಾಯಕನಾಗಿದ್ದು, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಐಟಿ-ಬಿಟಿ ಸಚಿವರಾಗಿ ಜನಪರ ಕೆಲಸಗಳನ್ನು ಮಾಡಿದ್ದಾರೆ. ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವ ಜೊತೆಗೆ ಶೋಷಿತ ವರ್ಗಗಳ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.‌

ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಂತೆ ಪ್ರಿಯಾಂಕ್ ಖರ್ಗೆ ಕೂಡ ರಾಜ್ಯದ ಅಭಿವೃದ್ಧಿಗೆ ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಗುರುತಿಸಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ, ಕಾಂಗ್ರೆಸ್ ಮುಖಂಡರಾದ ಮುಕ್ತಾರ ಪಟೇಲ್, ವೀರಣ್ಣಗೌಡ ಪರಸರೆಡ್ಡಿ ಮಾತನಾಡಿದರು. ನಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ‌
ಅವರ ಮುಖಾಂತರ ಕೆಪಿಸಿಸಿ‌ ಅಧ್ಯಕ್ಷರಿಗೆ ಮನವಿ‌ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಿವರುದ್ರ ಭೀಣಿ, ಸುನೀಲ್ ದೊಡ್ಡಮನಿ, ಬಸವರಾಜ ಹೊಸ್ಸಳ್ಳಿ, ಜಗದೇವರೆಡ್ಡಿ ರಾಮತೀರ್ಥ, ನಿಂಗಣ್ಣ ಹೇಗಲೇರಿ, ನಾಮದೇವ ರಾಠೋಡ, ಮಲ್ಲಿಕಾರ್ಜುನ ಕಾಳಗಿ, ಶೀಲಾ ಕಾಶಿ, ಚಂದ್ರಶೇಖರ ಕಾಶಿ, ಬಸವರಾಜ ಪೂಜಾರಿ ಮೊಗಲಿ, ದೇವಿಂದ್ರ ಅಣಕಲ್, ಮಲ್ಲಿಕಾರ್ಜುನ ಬಮ್ಮನಳ್ಳಿ, ಜಗದೀಶ ಚವ್ಹಾಣ, ಉದಯಕುಮಾರ ಸಾಗರ್, ದೇವು ಯಾಬಾಳ, ನಾಗಯ್ಯ ಗುತ್ತೇದಾರ, ಹಣಮಂತ ಸಂಕನೂರ, ಶ್ರೀಮಂತ ಗುತ್ತೇದಾರ, ನಾಗರೆಡ್ಡಿ ಗೋಪಸೇನ್, ಬಸವರಾಜ ಚಿನ್ನಮಳ್ಳಿ, ನಯೀಮ್, ಶೇಖ ಬಬ್ಲು, ಸಂತೋಷ ಪೂಜಾರಿ, ಬಾಬು ಕಾಶಿ, ಜಗದೀಶ ಮುಡಬೂಳಕರ್, ಲೋಹಿತ್, ಆರ್.ಡಿ ಪಾಟೀಲ್, ವಿನ್ನು ಜೆಡಿ, ಓಕಾಂರ ರೇಶ್ಮಿ, ಮೋಸಿನ್ ಚೈನು ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *