ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲು

ಜಿಲ್ಲೆ

ಸುದ್ದಿ ಸಂಗ್ರಹ ರಾಯಚೂರು
ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಹೈದ್ರಾಬಾದ್ ಮೂಲದ ಯುವನ ಚಂದ್ರ , ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23), ಉರವಕೊಂಡದ ಸಂಧ್ಯಾ (22) ನೀರು ಪಾಲಾದವರು. ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆಗೆ ಬಂದಿದ್ದ ಸಂಬಂಧಿಕರು ದುರ್ಮರಣಕ್ಕೀಡಾಗಿದ್ದಾರೆ.

ಪೂಜೆಯ ಬಳಿಕ ನದಿಯಲ್ಲಿ ಈಜಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ. ನದಿಯಲ್ಲಿ ನೀರಿನ ಆಳ ತಿಳಿಯದೆ ಈಜಲು ಹೋಗಿ ನೀರು ಪಾಲಾಗಿದ್ದಾರೆ. ಘಟನೆಯಲ್ಲಿ ಯುವತಿ ಅಪರ್ಣಾ ಪಾರಾಗಿದ್ದಾಳೆ. ಸ್ಥಳದಲ್ಲಿ ಪೊಲೀಸರು, ಮೀನುಗಾರರಿಂದ ಹುಡುಕಾಟ ನಡೆದಿದ್ದು ಧನುಷ್ ಮೃತ ದೇಹ ಪತ್ತೆಯಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಎಮ್ಮಿಗನೂರು ಡಿವೈಎಸ್‌ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನದಿಯಲ್ಲಿ ನೀರು ಪಾಲಾದವರ ಹುಡುಕಾಟದ ವೇಳೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಮಂತ್ರಾಲಯಂ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *