ಸುದ್ದಿ ಸಂಗ್ರಹ ಬೆಂಗಳೂರು
ನೆಲಮಂಗಲ ನಗರದ ಅರಿಶಿನಕುಂಟೆ ಫ್ಲೈ ಓವರ್ ಮೇಲೆ ಘಟನೆ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ನಡೆದಿದೆ.
ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ನಾಲ್ಕು ಕಾರುಗಳ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ವೀಕೆಂಡ್ ಹಿನ್ನೆಲೆಯಲ್ಲಿ ಬೇರೆಡೆಗೆ ತೆರಳಿದ್ದವರು ಬೆಂಗಳೂರು ಕಡೆ ಬರುವಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.