ಸುದ್ದಿ ಸಂಗ್ರಹ ಬೆಂಗಳೂರು
ರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಾರಿ ಮುಂಗಾರು ಪ್ರವೇಶ ತಡ ಆಗಲಿದೆ ಎನ್ನಲಾಗಿತ್ತು. ಆದರೆ ತಡ ಆಗಿಲ್ಲ ಸರಿಯಾದ ಸಮಯಕ್ಕೆ ಮುಂಗಾರು ಪ್ರವೇಶಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನಿಂದ ಮುಂದಿನ ಐದು ದಿನಗಳ ವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಗದಗ, ಮೈಸೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂ.3 ರಂದು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಮತ್ತು ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.