ಖಾತೆ ಹಂಚಿಕೆ ಬೆನ್ನಲ್ಲೆ ಭುಗಿಲೆದ್ದ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರ ರಾಮಲಿಂಗಾ ರೆಡ್ಡಿ ?

ನಗರದ

ಸುದ್ದಿ ಸಂಗ್ರಹ ಬೆಂಗಳೂರು
ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸಂಪುಟದ ಎಲ್ಲಾ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪ್ರಕ್ರಿಯೆಯಲ್ಲಿ ಅನೇಕ ಸಚಿವರಿಗೆ ತಾವು ಬಯಸಿದ ಖಾತೆ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು ನಗರಾಭಿವೃದ್ಧಿ (ಜಿಬಿಎ) ಇಲಾಖೆ ಕೈತಪ್ಪಿದ ಹಿನ್ನೆಲೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗ್ತಿದೆ. ‌ಬೆಂಗಳೂರು ನಗರಾಭಿವೃದ್ಧಿ ಕೈತಪ್ಪಿದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಖಾತೆ ಹಂಚಿಕೆ ಬೆನ್ನಲ್ಲೆ ಸಚಿವ ರಾಮಲಿಂಗಾ ರೆಡ್ಡಿ, ಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಕರೆ ಮಾಡಿದ್ದಾರಂತೆ. ಜಲಸಂಪನ್ಮೂಲ ಖಾತೆ ಬೇಡ ಬೆಂಗಳೂರು ಅಭಿವೃದ್ಧಿ ಕೊಡಲು ಆಗದಿದ್ದರೆ ನಾನು ಶುಕ್ರವಾರ ಬೆಳಗ್ಗೆ ರಾಜೀನಾಮೆ ಪತ್ರ ಕಳುಹಿಸುತ್ತೆನೆ ಎಂದು ಹೇಳಿದ್ದಾರಂತೆ.

ಇದಕ್ಕೆ ʻಎಐಸಿಸಿ‌ ಯಿಂದ ಹೇಳಿದ್ದಾರೆ, ಖಾತೆ ಬದಲಾವಣೆಗೆ ಖರ್ಗೆ ಅವರು ಒಪ್ಪುತ್ತಿಲ್ಲ ಎಂದು ರಾಮಲಿಂಗಾ ರೆಡ್ಡಿಗೆ ಸಿಎಂ ಡಿಕೆ ಶಿವಕುಮಾರ್‌ ಹೇಳಿದ್ರಂತೆ. ಆದರೂ ಅಸಮಾಧಾನಗೊಂಡ ರಾಮಲಿಂಗಾ ರೆಡ್ಡಿ ಅವರು, ಹಾಗಾದರೆ ಬೆಳಗ್ಗೆ ರಾಜೀನಾಮೆ ಪತ್ರ ಕಳುಹಿಸುತ್ತೆನೆ ಎಂದು ಕಾಲ್ ಕಟ್ ಮಾಡಿದ್ರಂತೆ, ಅಸಮಾಧಾನ ಮುಂದುವರಿದರೆ, ಬೆಳಗ್ಗೆ 9 ಗಂಟೆ ಬಳಿಕ ಸಿಎಂ ಗೆ ರಾಜೀನಾಮೆ ಪತ್ರ ಕಳುಹಿಸಿ ಕೊಡುವ ಸಾಧ್ಯತೆಯಿದೆ.

ಯಾರಿಗೆ ಯಾವ ಖಾತೆ ?

  • ಡಿ.ಕೆ ಶಿವಕುಮಾರ್ – ಮುಖ್ಯಮಂತ್ರಿ – ಹಣಕಾಸು, ಗುಪ್ತಚರ, ಸಹಕಾರ, ಸಿಬ್ಬಂದಿ ಆಡಳಿತ ಸುಧಾರಣೆ
  • ಡಾ. ಜಿ ಪರಮೇಶ್ವರ – ಉಪಮುಖ್ಯಮಂತ್ರಿ – ಕಂದಾಯ, ಯುವ ಸಬಲೀಕರಣ
  • ಪ್ರಿಯಾಂಕ್ ಖರ್ಗೆ – ಗೃಹ, ಐಟಿಬಿಟಿ
  • ಕೃಷ್ಣ ಬೈರೇಗೌಡ – ಬೆಂಗಳೂರು ಅಭಿವೃದ್ದಿ
  • ಡಾ.ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ದಿ, ಹಿಂದುಳಿದ ಕಲ್ಯಾಣ
  • ಯು.ಟಿ ಖಾದರ್ – ಆರೋಗ್ಯ
  • ಸತೀಶ್ ಜಾರಕಿಹೊಳಿ – ಲೋಕೋಪಯೋಗಿ
  • ಎಂ.ಬಿ ಪಾಟೀಲ್ – ಬೃಹತ್ ಕೈಗಾರಿಕೆ
  • ಕೆ.ಜೆ ಜಾರ್ಜ್ – ಇಂಧನ, ಪ್ರವಾಸೋದ್ಯಮ
  • ಕೆ.ಎಚ್ ಮುನಿಯಪ್ಪ – ಆಹಾರ
  • ರಾಮಲಿಂಗಾ ರೆಡ್ಡಿ – ಜಲಸಂಪನ್ಮೂಲ
  • ಈಶ್ವರ್ ಖಂಡ್ರೆ – ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ
  • ಬೈರತಿ ಸುರೇಶ್ – ಸಾರಿಗೆ
  • ಡಾ.ಶರಣಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ

Leave a Reply

Your email address will not be published. Required fields are marked *