ಸುದ್ದಿ ಸಂಗ್ರಹ ಕಲಬುರಗಿ
ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಂಪುಟದಲ್ಲಿ ರಾಜ್ಯದ ಗೃಹ ಇಲಾಖೆ, ಐಟಿಬಿಟಿ ಮತ್ತು ಇ-ಆಡಳಿತ ಇಲಾಖೆಗಳ ಸಚಿವರಾಗಿ ಕೆಲಸ ಮಾಡುವ ಮಹತ್ವದ ಜವಾಬ್ದಾರಿ ನೀಡಿರುವ ಕಾಂಗ್ರೆಸ್ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ ಶಿವಕುಮಾರ, ಸಿದ್ದರಾಮಯ್ಯ, ರಂದೀಪ್ ಸುರ್ಜೆವಾಲ ರವರಿಗೆ ಕೃತಜ್ಞತೆ ಸಲ್ಲಿಸುತ್ತೆನೆ ಎಂದು ನೂತನ ಗೃಹ, ಐಟಿ/ಬಿಟಿ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ವಿಶೇಷವಾಗಿ, ನನಗೆ ಸತತವಾಗಿ ಆಶೀರ್ವದಿಸಿ ನಿರಂತರವಾಗಿ ಬೆಂಬಲಿಸುತ್ತಾ ಬಂದಿರುವ ಚಿತ್ತಾಪುರ ಕ್ಷೇತ್ರದ ಮತ್ತು ಕಲಬುರಗಿ ಜಿಲ್ಲೆಯ ಜನರಿಗೆ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಅನಂತಾನಂತ ಧನ್ಯವಾದಗಳು ಸಲ್ಲಿಸುತ್ತೆನೆ.
ಬುದ್ದ-ಬಸವಣ್ಣ-ಅಂಬೇಡ್ಕರ್’ರ ಆಶಯಗಳಂತೆ ಕರ್ನಾಟಕವನ್ನು ಪ್ರಬುದ್ಧ ಸಮಾಜವಾಗಿಸುವ ಪ್ರಾಮಾಣಿಕ ಪ್ರಯತ್ನದಲ್ಲಿ ರಾಜ್ಯದ ಎಲ್ಲರ ಆತ್ಮೀಯ ಸಹಕಾರವನ್ನು ಕೇಳಿಕೊಳ್ಳುತ್ತೆನೆ.