ರಾಜೀನಾಮೆ ಕೊಟ್ಟ ರಾಮಲಿಂಗಾರೆಡ್ಡಿ ಭೇಟಿಯಾದ ಸಿಎಂ: ಮನವೊಲಿಕೆಗೆ ಯತ್ನ

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾರೆಡ್ಡಿ ಅವರನ್ನು ಸಿಎಂ ಡಿ.ಕೆ ಶಿವಕುಮಾರ್‌ ಭೇಟಿಯಾಗಿದ್ದಾರೆ.

ಕೋರಮಂಗಲದ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿಯನ್ನು ಸಿಎಂ ಭೇಟಿ ಮಾಡಿದ್ದಾರೆ. ಖುದ್ದು ಮನವೊಲಿಕೆಗೆ ಪ್ರಯತ್ನಿದ್ದಾರೆ.

ಇದಕ್ಕೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಹೈಕಮಾಂಡ್ ಅವರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ನಾನು ಸಿಗೋಕೆ ಊರಲ್ಲಿ ಇರಲಿಲ್ಲ. ತಮಿಳುನಾಡಿನ ಧರ್ಮಪುರಿಗೆ ಸಮಾರಂಭಕ್ಕೆ ಹೋಗಿದ್ದೆ. ಖಾತೆ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದರು.

ತಾವು ಬಯಸಿದ ಖಾತೆಯನ್ನು ಬಿಟ್ಟು ಬೇರೆ ಖಾತೆ ಕೊಟ್ಟಿದ್ದಾರೆಂದು ಬೇಸರಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Leave a Reply

Your email address will not be published. Required fields are marked *