ಕಾಳಗಿ: ರಿಯಾಯಿತಿ ದರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ

ಪಟ್ಟಣದ

ಸುದ್ದಿ ಸಂಗ್ರಹ ಕಾಳಗಿ
ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರಿಗೆ ರಿಯಾಯಿತಿ ದರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ ನೀಡಲಾಯಿತು.

ಚಿತ್ತಾಪುರ ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ್ ಬೀಜ ವಿತರಿಸಿ ಮಾತನಾಡಿದ ಅವರು, ಮುಂಗಾರು ಹಂಗಾಮಿನಲ್ಲಿ ತಾಲೂಕಿನ 71ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಕಾಳಗಿ, ಕೋಡ್ಲಿ ಮತ್ತು ಮಾಡಬೂಳ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಬಿತ್ತನೆಗೆ ಬೇಕಾಗುವಷ್ಟು ಸೋಯಾ, ತೊಗರಿ, ಹೆಸರು, ಉದ್ದು ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ರೈತರು ಅಗತ್ಯ ದಾಖಲೆಗಳನ್ನು ನೀಡಿ ಬೀಜಗಳನ್ನು ರಿಯಾಯಿತಿ ದರದಲ್ಲಿ ಪಡೆಯಬಹುದು ಎಂದರು. ಬಿತ್ತನೆಗೆ ಸಂಬಂಧಪಟ್ಟಂತೆ ಅವರು ಸಲಹೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಅಧಿಕಾರಿ ರಾಹುಲ್ ಚವ್ಹಾಣ ಮಾತನಾಡಿದರು.

ಕೃಷಿಕ ಸಮಾಜದ ಅಧ್ಯಕ್ಷ ಶರಣಗೌಡ ಪಾಟೀಲ, ಉಪಾಧ್ಯಕ್ಷ ಪ್ರಭು ಭಾವಿ, ವಿಜಯ್ ಕುಮಾರ ತುಪ್ಪದ, ಶಿವಶರಣಪ್ಪ ಕಮಲಾಪುರ, ಕೃಷಿ ಅಧಿಕಾರಿ ಸರೋಜಾ ಕಲಬುರಗಿ, ಶರಣು ಪೂಜಾರಿ, ಅನಿತಾ ಹವಳಗಿ, ಅಮರನಾಥ ಸೂರ್ಯವಂಶಿ, ಜಾವಿದ್ ತೆಂಗಳಿ, ದೇವಿಂದ್ರ ಪೂಜಾರಿ, ನಾಗರಾಜ ಕೊಡದೂರ, ರಂಜೀತ್ ಬೆಡಸೂರ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *