ಸುದ್ದಿ ಸಂಗ್ರಹ ಕಲಬುರಗಿ
ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಇ-ಆಡಳಿತದ ನೂತನ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದುಗೌಡ ಆಫಜಲಪೂರಕರ್ ಸನ್ಮಾನಿಸಿ ಅಭಿನಂದಿಸಿದರು.
ಬೆಂಗಳೂರಿನ ಗೃಹ ಕಚೇರಿಯಲ್ಲಿ ನೂತನ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾಗಿ ಸನ್ಮಾನಿಸಿ ಶುಭ ಹಾರೈಸಿದರು. ನಂತರ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ರಾಜ್ಯದ ಕಾನೂನು- ಸುವ್ಯವಸ್ಥೆ ಮತ್ತಷ್ಟು ಬಲಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಅಭಿವೃದ್ಧಿ, ಜನಪರ ಆಡಳಿತ, ಶಾಂತಿ-ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆಯ ಪಾತ್ರ ಮಹತ್ವದ್ದಾಗಿದ್ದು, ಪ್ರಿಯಾಂಕ್ ಖರ್ಗೆ ಅವರು ತಮ್ಮ ಅನುಭವದ ಮೂಲಕ ಇಲಾಖೆಯನ್ನು ಸಮರ್ಥವಾಗಿ ಮುನ್ನಡೆಸಲಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕಲಬುರಗಿಯ ಮಾಜಿ ಉಪ ಮಹಾಪೌರ ಮಹೇಶ ಹೊಸೂರಕರ್, ಪ್ರಚಾರ ಸಮೀತಿಯ ಜಿಲ್ಲಾ ಅಧ್ಯಕ್ಷ ಅಶೋಕ ವೀರನಾಯಕ, ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಈರಣ್ಣ ಝಲಕಿ, ಮಾಜಿ ಮಹಾ ನಗರ ಪಾಲಿಕೆ ಸದಸ್ಯ ಹುಲಿಗೆಪ್ಪ ಕನಕಗಿರಿ, ಯೂಥ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಶಿವಾನಂದ ಹೋನಗುಂಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.