ಶಹಬಾದ್ ರೌಡಿ ಶೀಟರ್ ಸೈಯದ್ ಜಬೀಉಲ್ಲಾ ಗಡಿಪಾರು

ನಗರದ

ಸುದ್ದಿ ಸಂಗ್ರಹ ಶಹಾಬಾದ್
ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್, ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಸೈಯದ್ ಜಬೀಉಲ್ಲಾ ಎಂಬುವವನನ್ನು ಕಲಬುರಗಿ ಜಿಲ್ಲೆಯಿಂದ ಗಡಿಪಾರು ಮಾಡಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಆದೇಶಿಸಿದ್ದಾರೆ.

ಸೈಯದ್ ವಿರುದ್ಧ ವಿವಿಧ ಕಲಂ ಗಳ ಅಡಿಯಲ್ಲಿ ಒಟ್ಟು 5 ಪ್ರಕರಣಗಳು ದಾಖಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಈ ವ್ಯಕ್ತಿಯನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸೈಯದ್ ವಿರುದ್ಧ ಇದುವರೆಗೆ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ 3 ಪ್ರಕರಣಗಳು, ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ 1 ಪ್ರಕರಣ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಅಡಿಯಲ್ಲಿ 1 ಪ್ರಕರಣ ಸೇರಿ ಒಟ್ಟು 5 ಪ್ರಕರಣಗಳು ದಾಖಲಾಗಿದ್ದವು.

ಆರೋಪಿತನು ಶಹಾಬಾದ್ ನಗರ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರ ಮೇಲೆ ಹಲ್ಲೆ ಮಾಡುವುದು, ಬೆದರಿಕೆ ಹಾಕುವುದು, ಗಾಯಗೊಳಿಸುವುದು, ಕಳ್ಳತನ ಮಾಡುವುದು, ಸಾರ್ವಜನಿಕರಲ್ಲಿ ಭಯದ ವಾತವರಣ ಸೃಷ್ಟಿಸುವುದು ಮುಂತಾದ ಗಂಭೀರ ಸ್ವರೂಪದ ಅಪರಾಧಗಳಲ್ಲಿ ತೊಡಗಿರುತ್ತಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಸೈಯದ್‌ನನ್ನು ಸದ್ಯ ಧಾರವಾಡ ನಗರದ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

Leave a Reply

Your email address will not be published. Required fields are marked *