ಸುದ್ದಿ ಸಂಗ್ರಹ ಶಹಾಬಾದ್
ವಿಭಿನ್ನ ಪ್ರಯೋಗಗಳ ಮೂಲಕ ಮಕ್ಕಳಲ್ಲಿ ಆಸಕ್ತಿದಾಯಕ ಕಲಿಕೆ ಮೂಡಿಸುವುದರೊಂದಿಗೆ ಮಕ್ಕಳ ದಾಖಲಾತಿ ಹೆಚ್ಚಿಸಲು ಕಾರಣರಾಗಿರುವ ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯ ಕ್ರಿಯಾಶೀಲ ಸಮಾಜ ವಿಜ್ಞಾನ ಶಿಕ್ಷಕ ಸಿದ್ದಲಿಂಗ ಬಾಳಿ ರಾವೂರ ಅವರಿಗೆ ಜೂನ್ 21ರಂದು ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಚೇತನ ಪ್ರತಿಷ್ಠಾನ ಧಾರವಾಡ, ಆರ್ಯಭಟ ಎಜುಕೇಷನ್ ಟ್ರಸ್ಟ್ ವತಿಯಿಂದ ಜೂನ್ 21ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್’ನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿರುವ ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ಪ್ರತಿಷ್ಠಿತ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದೆ ಎಂದು ಚೇತನ ಪ್ರತಿಷ್ಠಾನದ ಅಧ್ಯಕ್ಷ ಡಾ. ಚಂದ್ರಶೇಖರ ಮಾಡಲಗೇರಿ ತಿಳಿಸಿದ್ದಾರೆ.