ತಾಲೂಕು ಆಸ್ಪತ್ರೆಯಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಕರವೇ ಮುಖಂಡರಿಂದ ಮನವಿ…ಸುದ್ದಿ ಸಂಗ್ರಹ ಚಿತ್ತಾಪುರ
ತಾಲೂಕು ಆಸ್ಪತ್ರೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯ ಸೇರಿದಂತೆ ಆಸ್ಪತ್ರೆಯಲ್ಲಿನ ಕುಂದು ಕೊರತೆಯ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ ಬಣ) ತಾಲೂಕು ಅಧ್ಯಕ್ಷ ಚಂದರ್ ಚವ್ಹಾಣ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಮುಲ್ಲಾ ಷರೀಫ್ ಅವರಿಗೆ ಮನವಿ ಸಲ್ಲಿಸಿದರು…..ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಮುಲ್ಲಾ ಷರೀಫ್ ಅವರು ಗುರುವಾರ ಭೇಟಿ ನೀಡಿದ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷರು ಮತ್ತು ಕಾರ್ಯಕರ್ತರು ಆಸ್ಪತ್ರೆಯಲ್ಲಿನ ಮೂಲಭೂತ ಸೌಕರ್ಯ ಮತ್ತು ನೀರಿನ ಸಮಸ್ಯೆಗೆ ಕ್ಷೇತ್ರದ ಶಾಸಕ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ನೂರಾರು ಕೋಟಿ ರೂ ಬಜೆಟ್ ತಂದಿದ್ದಾರೆ ಆದರೆ ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾಗಿ ಮುಟ್ಟಿಸುವಲ್ಲಿ ವಿಫಲರಾಗಿದ್ದಾರೆ ಎಂದರು.….ಆಸ್ಪತ್ರೆಯ ವೈದ್ಯರು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಬರುವುದಿಲ್ಲ ಹೀಗಾಗಿ ಸಾರ್ವಜನಿಕರು, ರೋಗಿಗಳು ಪರದಾಡುವಂತ ಪರಿಸ್ಥಿತಿ ಬಂದಿದೆ ಎಂದರು…..ತಾಲೂಕಿನಲ್ಲಿ ನಕಲಿ ವೈದ್ಯರು, ನಕಲಿ ಕ್ಲಿನಿಕ್‌ಗಳ ಹಾವಳಿ ಹೆಚ್ಚಾಗಿದೆ. ಮುಗ್ಧ ರೋಗಿಗಳ ಪ್ರಾಣದ ಜತೆ ನಕಲಿ ವೈದ್ಯರು ಚೆಲ್ಲಾಟ ಆಡುತ್ತಿದ್ದಾರೆ, ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು….ಈ ಸಂದರ್ಭದಲ್ಲಿ ಕರವೇ ಪ್ರಧಾನ ಕಾರ್ಯದರ್ಶಿ ಶೇರ್ ಅಲಿ, ಗಣೇಶ ರಾಠೋಡ, ಅರುಣ ಸಿಂಧೆ, ರಾಜೇಶ್ ಗುತ್ತೇದಾರ, ಶಿವರಾಮ ಚವ್ಹಾಣ, ಅರ್ಜುನ್ ಕಟ್ಟಿಮನಿ, ದೇವಿಂದ್ರ ಯಾಗಾಪೂರ, ನಾಗೇಶ
ರಾಠೋಡ ಮತ್ತು ವಿಶ್ವರಾಧ್ಯ ನಾಲವಾರ ಸೇರಿದಂತೆ ಅನೇಕರು ಇದ್ದರು.