ಸುದ್ದಿ ಸಂಗ್ರಹ ಶಹಾಬಾದ್
ನಗರದ ಲಕ್ಷ್ಮಿ ಗಂಜ್ ಬಡಾವಣೆಯ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀಮತಿ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಕನ್ನಡ ಮಾಧ್ಯಮ ಶಾಲೆಯಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಡಗರದಿಂದ ಆಚರಿಸಲಾಯಿತು.
ಸಂಸ್ಥೆಯ ಆಡಳಿತ ಮುಖ್ಯಾಧಿಕಾರಿ ದೇವೆಂದ್ರ ಅಂಗಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ಮನಸ್ಸು ಮತ್ತು ದೇಹ ಸಮತೋಲನದಲ್ಲಿಡುವ ಅತ್ಯುತ್ತಮ ಮಾರ್ಗವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ರೂಢಿಸಿಕೊಳ್ಳಬೇಕು’ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಯೋಗ ಗುರು ಮೋಹನ ಘಂಟ್ಲಿ ಅವರು ಶಾಲೆಯ ಮಕ್ಕಳಿಗೆ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮ ಪ್ರಾಯೋಗಿಕವಾಗಿ ಮಾಡಿಸಿಕೊಟ್ಟರು. ನಂತರ ಮಾತನಾಡಿದ ಅವರು, ‘ವಿದ್ಯಾರ್ಥಿ ದೆಸೆಯಲ್ಲಿ ಯೋಗ ಮಾಡುವುದರಿಂದ ಏಕಾಗ್ರತೆ, ನೆನಪಿನ ಶಕ್ತಿ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ’ ಎಂದು ಯೋಗದ ಮಹತ್ವ ತಿಳಿಸಿಕೊಟ್ಟರು.
ಯೋಗಾಭ್ಯಾಸದಲ್ಲಿ ಮಕ್ಕಳೊಂದಿಗೆ ಸಕ್ರಿಯವಾಗಿ ಸರ್ವರೂ ಪಾಲ್ಗೊಂಡರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ವಾಸುದೇವ ಚವ್ಹಾಣ್, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.