133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ನೀಡಿದೆ.

ಬ್ರ್ಯಾಂಡೆಡ್‌ ಔಷಧಿ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಔಷಧ ನಿಯಂತ್ರಣ ಇಲಾಖೆ ಕಳೆದ ಎರಡು ದಿನಗಳಲ್ಲಿ 172 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ಮೇಲೆ ದಾಳಿ ಮಾಡಿದ್ದು, ಇದೀಗ 133 ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಹೊರಡಿಸಿದೆ.

ರಾಜ್ಯದಲ್ಲಿ 1,200ಕ್ಕೂ ಹೆಚ್ಚು ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಇವೆ. ಇದರಲ್ಲಿ 172ರ ಔಷಧಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದು, ಈ ಪೈಕಿ 133 ಕೇಂದ್ರಗಳಲ್ಲಿ ಬ್ರ್ಯಾಂಡೆಡ್‌ ಔಷಧಿ ಮಾರಾಟ ಆಗಿರುವುದು ಬೆಳಕಿಗೆ ಬಂದಿದೆ. ಇನ್ನೂ ಉಳಿದ ಜನೌಷಧಿ ಕೇಂದ್ರಗಳನ್ನು ಪರಿಶೀಲನೆ ಮಾಡಲಿದ್ದಾರೆ.

ಸದ್ಯ ಜನೌಷಧಿ ಮಾಲೀಕರು ಶೋಕಾಸ್ ನೋಟಿಸ್‌ಗೆ ಉತ್ತರ ಕೊಡಬೇಕು. ಯಾಕೆ ಬ್ರ್ಯಾಂಡೆಡ್‌ ಮಾರಾಟ ಮಾಡುತ್ತಿದ್ದಿರಾ ಎಂದು ಉತ್ತರ ಕೊಡಬೇಕು. ಇಲ್ಲದೆ ಹೋದರೆ ಕಾನೂನು ರೀತಿಯ ಕ್ರಮ ಜರುಗಿಸೋದಕ್ಕೆ ರಾಜ್ಯ ಔಷಧ ನಿಯಂತ್ರಣ ಇಲಾಖೆ ಮುಂದಾಗಿದೆ.

Leave a Reply

Your email address will not be published. Required fields are marked *