ಕೆಕೆಆರ್‌ಟಿಸಿ ಬಸ್‌-ಬೈಕ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೆ ಸಾವು

ಜಿಲ್ಲೆಯ

ಸುದ್ದಿ ಸಂಗ್ರಹ ಕಲಬುರಗಿ
ದ್ವಿಚಕ್ರ ವಾಹನ ಮತ್ತು ಕೆಕೆಆರ್‌ಟಿಸಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಸಮೀಪ ಬುಧವಾರ ರಾತ್ರಿ ಈ ಅವಘಡ ಸಂಭವಿಸಿದೆ.

ಚಿತ್ತಾಪುರದಿಂದ ಸನ್ನತಿಗೆ ಹೊರಟಿದ್ದ ಕೆಕೆಆರ್‌ಟಿಸಿ ಬಸ್‌ ಹಾಗೂ ಬೊಮ್ಮನಳ್ಳಿ ಕಡೆಯಿಂದ ಚಿತ್ತಾಪುರ ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ದುರಂತದಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ಮೂವರ ಮೇಲೆ ಬಸ್ ಚಕ್ರಗಳು ಹರಿದ ಪರಿಣಾಮ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಬೊಮ್ಮನಹಳ್ಳಿ ಗ್ರಾಮದ ದೇವರಾಜ ಅಯ್ಯಪ್ಪ (19), ಮುಡಬೂಳ ಗ್ರಾಮದ ಲಕ್ಷ್ಮಿಕಾಂತ (20) ಮತ್ತು ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮದ ಪ್ರಕಾಶ ಬಸಪ್ಪ (23) ಮೃತಪಟ್ಟಿದ್ದಾರೆ.‌

ಘಟನಾ ಸ್ಥಳಕ್ಕೆ ಶಹಾಬಾದ್‌ ಡಿವೈಎಸ್ಪಿ ಶಂಕರಗೌಡ ಪಾಟೀಲ, ಚಿತ್ತಾಪುರ ಸಿಪಿಐ ಎಸ್.ಬಿ ಪಾಟೀಲ ಮತ್ತು ಪಿಎಸ್ಐ ಮಂಜುನಾಥ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಗಳನ್ನು ಚಿತ್ತಾಪುರ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

Leave a Reply

Your email address will not be published. Required fields are marked *