ಸುದ್ದಿ ಸಂಗ್ರಹ ಬೆಳಗಾವಿ
ಗಂಡು ಮಗು ಹುಟ್ಟಿದಕ್ಕೆ ಪಾರ್ಟಿ ಕೇಳಿದ ಸ್ನೇಹಿನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹಣಮಂತಪ್ಪ ಯಮನಪ್ಪ ಇಟಗಿ ಕೊಲೆಯಾದ ದುರ್ದೈವಿ. ಈತನ ಗೆಳೆಯ ವಿಶ್ವನಾಥ ಪೂಜೇರಿ ಕೊಲೆಗೈದ ಆರೋಪಿ. ಇಬ್ಬರು ಮದ್ಯದ ಅಮಲಿನಲ್ಲಿ ಗ್ರಾಮದ ಕಟ್ಟೆಯಲ್ಲಿ ಕುಳಿತು ಹರಟೆಯಲ್ಲಿ ತೊಡಗಿದ್ದರು. ಆಗ ಗಂಡು ಮಗು ಹುಟ್ಟಿದಕ್ಕೆ ವಿಶ್ವನಾಥ್ ಬಳಿ ಹಣಮಂತಪ್ಪ ಪಾರ್ಟಿ ಕೇಳಿದ್ದ. ಈ ವಿಚಾರಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.
ಗಲಾಟೆ ವೇಳೆ ವಿಶ್ವನಾಥನ ಕಣ್ಣಿಗೆ ರಭಸವಾಗಿ ಹಣಮಂತಪ್ಪನ ಬೆರಳುತಾಗಿದೆ. ಇದೆ ಸಿಟ್ಟಲ್ಲಿ ಕಲ್ಲಿನಿಂದ ಹಣಮಂತ ತಲೆಗೆ ಆರೋಪಿ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಹಣಮಂತಪ್ಪ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನೇಸರಗಿ ಠಾಣೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.