ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ದೇವಿಂದ್ರ ಅರಣಕಲ್

ಪಟ್ಟಣದ

ಸುದ್ದಿ ಸಂಗ್ರಹ ಚಿತ್ತಾಪುರ
ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದು ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ದೇವಿಂದ್ರ
ಅರಣಕಲ್ ಹೇಳಿದರು.

ಪಟ್ಟಣದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ
ಸಂಘದ ಕಚೇರಿ ಹತ್ತಿರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಸಹಕಾರ ಸಚಿವಾಲಯ 5 ವರ್ಷ ಪೂರೈಸುತ್ತಿರುವ ನಿಮಿತ್ತ ಸಹಕಾರ ಸಪ್ತಾಹ ಆಚರಣೆ, ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಹಕಾರ ಸಪ್ತಾಹದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ
ಹಮ್ಮಿಕೊಳ್ಳಲಾಗಿದೆ. ಪರಿಸರ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಪಿಎಲ್’ಡಿ ಬ್ಯಾಂಕ್‌ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, ಮರ ಗಿಡಗಳು ಹೆಚ್ಚು ಬೆಳೆಸುವ ಮೂಲಕ ಪ್ರಕೃತಿಗೆ ಕೊಡುಗೆ ನೀಡೋಣ ಎಂದರು.

ಕೃಷಿ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರ ಮಾತನಾಡಿದರು.

ಸಂಘದ ಉಪಾಧ್ಯಕ್ಷ ಅಶೋಕ ಹರನಾಳ ವಾಡಿ, ನಿರ್ದೇಶಕ ರಾಚಣ್ಣ ಬೊಮ್ಮನಳ್ಳಿ, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ರೈತ ಸಂಘದ ಅಧ್ಯಕ್ಷ ಶಾಮರಾಯ ಸಂಗಾವಿ, ಶಿವಮೂರ್ತಿ ಯರಗಲ್ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *