ಸುದ್ದಿ ಸಂಗ್ರಹ ಚಿತ್ತಾಪುರ
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಕೈಗೊಂಡಿರುವ ರೈತರು ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಂಜೀವಕುಮಾರ ಮಾನಕರ ತಿಳಿಸಿದ್ದಾರೆ.
ಮಳೆ ಅಭಾವ, ಹೆಚ್ಚಿನ ಮಳೆ, ಬರ, ಪ್ರವಾಹ, ಭೂಕುಸಿತ, ಬೆಳೆ ಮುಳುಗಡೆ ಸೇರಿದಂತೆ ಇತರೆ ಪ್ರಾಕೃತಿಕ ವಿಕೋಪಗಳಿಂದ ಬೆಳೆಗೆ ಹಾನಿಯಾದರೆ ರೈತರಿಗೆ ವಿಮಾ ಪರಿಹಾರ ದೊರೆಯಲಿದೆ. ಮಳೆಯಾಶ್ರಿತ ಬೆಳೆಗಳಿಗೆ ಪ್ರತಿ ಎಕರೆಗೆ 321 ರೂ, ಉದ್ದು ಪ್ರತಿ ಎಕರೆಗೆ 314 ರೂ, ತೊಗರಿ ಪ್ರತಿ ಎಕರೆಗೆ 466 ರೂ, ಹತ್ತಿ ಪ್ರತಿ ಎಕರೆಗೆ 1,208 ರೂ. ಪಾವತಿಸಬೇಕು. ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ಮಾಡಿಸಿಕೊಂಡು ನಷ್ಟದ ಸಂದರ್ಭದಲ್ಲಿ ರಕ್ಷಣೆ ಪಡೆಯುವಂತೆ ತಿಳಿಸಿದ್ದಾರೆ.
ನೋಂದಣಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಬ್ಯಾಂಕ್‌ಗಳು, ನಾಗರಿಕ ಸೇವಾ ಕೇಂದ್ರ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು
ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.