ಸುದ್ದಿ ಸಂಗ್ರಹ ಚಿತ್ತಾಪುರ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ತಾಲೂಕಿನ ಉದಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರ ಎಂ.ಡಿ ಮಶಾಕ್ ಅವರು ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನಿಖರ ವರದಿಗಾರಿಕೆ, ಸಾಮಾಜಿಕ ಸಮಸ್ಯೆಗಳನ್ನು ಬೆಳಕಿಗೆ ತರುವ ನಿಷ್ಠೆ ಮತ್ತು ಜನಪರ ಕಾಳಜಿ ಮೂಲಕ ಎಂ.ಡಿ ಮಶಾಕ್ ಅವರು ಹಲವು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಭಾಗದ ಸಮಸ್ಯೆಗಳು, ಸಾರ್ವಜನಿಕ ಹಿತಾಸಕ್ತಿಯ ವಿಷಯಗಳು, ಆಡಳಿತಾತ್ಮಕ ಲೋಪಗಳು ಮತ್ತು ಅಭಿವೃದ್ಧಿ ವಿಚಾರಗಳನ್ನು ವಸ್ತುನಿಷ್ಠವಾಗಿ ಜನರಿಗೆ ತಲುಪಿಸುವಲ್ಲಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ.
ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಯು ಅವರ ವೃತ್ತಿಪರ ಬದ್ಧತೆ, ಪ್ರಾಮಾಣಿಕತೆ ಮತ್ತು ಸಮಾಜಮುಖಿ ಪತ್ರಿಕೋದ್ಯಮಕ್ಕೆ ಸಂದ ಗೌರವವಾಗಿದೆ. ಪ್ರಶಸ್ತಿ ಘೋಷಣೆಯಾದ ಬಳಿಕ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಪತ್ರಕರ್ತರು ಮತ್ತು ಸಾರ್ವಜನಿಕರು ಎಂ.ಡಿ ಮಶಾಕ್ ಅವರಿಗೆ ಅಭಿನಂದನೆಗಳು ಸಲ್ಲಿಸಿ, ಇನ್ನಷ್ಟು ಜನಪರ ಮತ್ತು ಮೌಲ್ಯಾಧಾರಿತ ಪತ್ರಿಕೋದ್ಯಮ ಮುಂದುವರಿಸಲಿ ಎಂದು ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದು. ಎಂ.ಡಿ ಮಶಾಕ್ ಅವರು ವೃತ್ತಿ ನಿಷ್ಠೆ, ನಿರ್ಭೀತ ವರದಿಗಾರಿಕೆ ಮತ್ತು ಸಾಮಾಜಿಕ ಕಾಳಜಿ ಮೂಲಕ ವರದಿಗಾರಿಕೆ ಮಾಡಿದರ ಫಲವಾಗಿ ಈ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಅವರ ಈ ಸಾಧನೆ ಯುವ ಪತ್ರಕರ್ತರಿಗೆ ಪ್ರೇರಣೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಮಟ್ಟದ ಈ ಗೌರವವು ಚಿತ್ತಾಪುರ ಪತ್ರಿಕೋದ್ಯಮಕ್ಕೆ ಮತ್ತಷ್ಟು ಪ್ರತಿಷ್ಠೆ ತಂದುಕೊಟ್ಟಿದ್ದು, ಸ್ಥಳೀಯ ಪತ್ರಕರ್ತರ ಸೇವೆಗೆ ದೊರೆತ ಮಹತ್ವದ ಮಾನ್ಯತೆಯಾಗಿದೆ ಎಂದರು.
ಜುಲೈ 27 ರಂದು ಸಂಜೆ 3.45ಕ್ಕೆ ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಜರುಗುವುದು.