ಸುದ್ದಿ ಸಂಗ್ರಹ ಚಿತ್ತಾಪುರ
ಚಿತ್ತಾಪುರ, ವಾಡಿ ಪುರಸಭೆ ವ್ಯಾಪ್ತಿಯಲ್ಲಿ ಮತ್ತು ಚಿತ್ತಾಪುರ ಮತಕ್ಷೇತ್ರ ವ್ಯಾಪ್ತಿಯಲ್ಲಿನ ಚಿತ್ತಾಪುರ, ಶಹಾಬಾದ್, ಕಾಳಗಿ ತಾಲೂಕಿನ ಗ್ರಾಮಗಳ ಮತಗಟ್ಟೆ ವ್ಯಾಪ್ತಿಯಲ್ಲಿ ಎಸ್ಐಆರ್ ಕುರಿತು ಗ್ರಾಮಸಭೆ ಆಯೋಜನೆ ಮಾಡಲಾಗಿದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಹೇಳಿದ್ದಾರೆ.
ತಾಲೂಕು ಪಂಚಾಯಿತಿ ಅಧಿಕಾರಿ ಮೂಲಕ ಈಗಾಗಲೆ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಬೆಳಗ್ಗೆ 8.30ಕ್ಕೆ ಗ್ರಾಮಸಭೆ ಶುರುವಾಗುತ್ತದೆ. ಸಭೆಯಲ್ಲಿ ಪಿಡಿಒ, ಬಿಎಲ್ಒ, ಬಿಎಲ್ಎ, ಮೇಲ್ವಿಚಾರಕರು, ನೋಡಲ್ ಅಧಿಕಾರಿ ಉಪಸ್ಥಿತರಿರುತ್ತಾರೆ. ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ ಕರಡು ಮತದಾರ ಪಟ್ಟಿಯಿಂದ ಹೊರಗುಳಿಯುವರ ಮಾಹಿತಿ ನೀಡಲಾಗುತ್ತದೆ. ಅದಕ್ಕೆ ಕಾರಣವೂ ತಿಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.