ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ: 21 ದಿನದಲ್ಲಿ 3.75 ಕೋಟಿ ಕಾಣಿಕೆ ಸಂಗ್ರಹ

ಜಿಲ್ಲೆಯ

ಸುದ್ದಿ ಸಂಗ್ರಹ ರಾಯಚೂರು
ಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 21 ದಿನದಲ್ಲಿ 3.75 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ಪ್ರತಿ ತಿಂಗಳಿನಂತೆ ಈ ಬಾರಿಯೂ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರ ದಂಡು ಮಠಕ್ಕೆ ಹರಿದು ಬಂದಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನ 21 ದಿನದಲ್ಲಿ ಕೋಟ್ಯಂತರ ರೂ. ಕಾಣಿಕೆ ಹರಿದು ಬಂದಿದ್ದು, 3,75,91,531 ರೂ. ಸಂಗ್ರಹವಾಗಿದೆ.

ಸಂಗ್ರಹವಾದ ಒಟ್ಟು ಕಾಣಿಕೆಯಲ್ಲಿ 3,65,16,531 ರೂ. ಕರೆನ್ಸಿ ನೋಟುಗಳು, 10,75,000 ರೂ. ನಾಣ್ಯಗಳು ಸಂಗ್ರಹವಾಗಿವೆ. ಇದರ ಜೊತೆಗೆ 49 ಗ್ರಾಂ ಚಿನ್ನ, 865 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ನೀಡಿದ್ದಾರೆ.

ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು. ಮುಜರಾಯಿ ಇಲಾಖೆ ಅಧಿಕಾರಿಗಳು, ಶ್ರೀಮಠದ ಅಧಿಕಾರಿಗಳು ಹುಂಡಿ ಎಣಿಕೆ ವೇಳೆ ಹಾಜರಿದ್ದರು.

Leave a Reply

Your email address will not be published. Required fields are marked *