ಸುದ್ದಿ ಸಂಗ್ರಹ ಬೆಂಗಳೂರು
ಜೊಮ್ಯಾಟೊ ಹೈಫರ್ಪ್ಯೂರ್ ಘಟಕದ ಮೇಲೆ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಆಹಾರ ಉತ್ಪನ್ನಗಳ ಪರಿಶೀಲನೆ ನಡೆಸಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲ್ಯಾಖೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ, ಆಹಾರ ಸುರಕ್ಷತಾ ವಿಭಾಗದ ವತಿಯಿಂದ ಬೆಂಗಳೂರಿನಲ್ಲಿ ಕೈಗೊಂಡ ತಪಾಸಣೆ ವೇಳೆ ಆಹಾರ ಪದಾರ್ಥಗಳು, ಮಾಂಸ ಮತ್ತು ಮೀನನ್ನು ನಗರದ ಜೊಮ್ಯಾಟೊ ಹೈಫರ್ಪ್ಯೂರ್ ಘಟಕದಿಂದ ಸರಬರಾಜು ಆಗಿರುವುದು ತಿಳಿದು ಬಂದ ಹಿನ್ನೆಲೆಯಲ್ಲಿ ಆಗಸ್ಟ್ 11 ರಂದು ಮಂಗಳವಾರ ಈ ಘಟಕದ ಮೇಲೆ ಆಹಾರ ಅಧಿಕಾರಿಗಳು ದಾಳಿ ನಡೆಸಿ ಪರೀಶಿಲನೆ ನಡೆಸಿದರು.
ಆಹಾರ ಪದಾರ್ಥಗಳ ಗುಣಮಟ್ಟ, ಸುರಕ್ಷತೆ, ಸಂಗ್ರಹಣೆ, ಲೇಬಲಿಂಗ್ ಮತ್ತು ಆಹಾರ ನಿರ್ವಹಣಾ ಕ್ರಮಗಳನ್ನು ಪರಿಶೀಲಿಸುವ ಉದ್ದೇಶದಿಂದ ತಪಾಸಣೆ ಕೈಗೊಳ್ಳಲಾಯಿತು ಎಂದು ಪ್ರಕಟಣೆ ತಿಳಿಸಿದೆ.
ಪರಿಶೀಲನೆ ವೇಳೆ, ಚಿಕನ್, ಬೆಳ್ಳುಳ್ಳಿ ಸೇರಿದಂತೆ ಅನೇಕ ಆಹಾರ ಪದಾರ್ಥಗಳ ಪ್ಯಾಕಿಂಗ್ಗಳ ಎಫ್ಎಸ್ಎಸ್ಎಐ ಪರವಾನಿ ಲೆಬಲ್ ಇಲ್ಲದಿರುವುದು ಕಂಡು ಬಂದಿದೆ.
ಈ ಸಂಬಂಧ ಜೊಮ್ಯಾಟೊ ಹೈಫರ್ಪ್ಯೂರ್ ಘಟಕಕ್ಕೆ ನೋಟಿಸ್ ಜಾರಿಗೊಳಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.