ಜೇವರ್ಗಿ: ಪಿಯು ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಪಟ್ಟಣದ

ಸುದ್ದಿ ಸಂಗ್ರಹ ಜೇವರ್ಗಿ
ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕರ ಸರ್ಕಾರಿ ಪ್ರೌಢ ಶಾಲೆ ಮತ್ತು ಸರ್ಕಾರಿ ಉರ್ದು ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸಂಭ್ರಮದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜನ್ಮದಿನೋತ್ಸವ ಜರುಗಿತು.

ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನ ದೊಡ್ಡಮನಿ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಉರ್ದು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ ಎಸ್.ಪಾಟೀಲ, ಬಾಲಕರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶಾಂತಾಬಾಯಿ ಮರ್ಚನ್, ಕಾಲೇಜಿನ ಉಪನ್ಯಾಸಕರು, ಉಭಯ ಪ್ರೌಢ ಶಾಲೆಯ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *