ಸುದ್ದಿ ಸಂಗ್ರಹ ನವದೆಹಲಿ
ಅಹಮದಾಬಾದ್‌ನಲ್ಲಿ ನಡೆದ 1.5 ಕೋಟಿ ರೂ. ಮೊತ್ತದ ‘ಬಾಸ್ ಸ್ಕ್ಯಾಮ್’ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರಿ ಸೈಬರ್ ಅಪರಾಧ ಜಾಲವೊಂದು ಪತ್ತೆಯಾಗಿದೆ. ಸೈಬರ್ ಅಪರಾಧಗಳಿಗೆ ಬಳಸಲಾಗುತ್ತಿದ್ದ ಸುಮಾರು 4,500 ಸಿಮ್ ಕಾರ್ಡ್‌ಗಳನ್ನು ಪೊಲೀಸರು ಪತ್ತೆಹಚ್ಚಿದ್ದು, ಈ ಜಾಲಕ್ಕೆ ಚೀನಾ ಮತ್ತು ಪಾಕಿಸ್ತಾನದೊಂದಿಗೆ ಸಂಪರ್ಕವಿರುವ ಶಂಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೆ ದೇಶದಾದ್ಯಂತ ಸಿಮ್ ಕಾರ್ಡ್‌ಗಳನ್ನು ಖರೀದಿಸುವ ಪ್ರಕ್ರಿಯೆ ಕೇಂದ್ರ ಸರ್ಕಾರ ಮತ್ತಷ್ಟು ಬಿಗಿಗೊಳಿಸಿದೆ.

ಸೈಬರ್ ವಂಚನೆ ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಹೊಸ ಸಿಮ್ ಕಾರ್ಡ್‌ಗಳ ವಿತರಣಾ ಪ್ರಕ್ರಿಯೆ ಮತ್ತಷ್ಟು ಬಿಗಿಗೊಳಿಸಿದೆ. ನಕಲಿ ಸಿಮ್‌ಗಳು, ಸೈಬರ್ ವಂಚನೆ ಮತ್ತು ‘ಡಿಜಿಟಲ್ ಅರೆಸ್ಟ್’ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸಿಮ್ ವಿತರಿಸುವ ಮುನ್ನ ಗ್ರಾಹಕರ ಮಾಹಿತಿಯನ್ನು ರಿಯಲ್‌ಟೈಮ್‌ನಲ್ಲಿ ಪರಿಶೀಲಿಸುವುದು ಕಡ್ಡಾಯವಾಗಲಿದೆ.
ಅಲ್ಲದೆ ಟೆಲಿಕಾಂ ಕಂಪನಿಗಳು ಗ್ರಾಹಕರ ವಿವರಗಳನ್ನು ಡಿಜಿಟಲ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್ ಮೂಲಕ ಪರಿಶೀಲಿಸಬೇಕು. ಅನುಮಾನಾಸ್ಪದ ಅಥವಾ ನಕಲಿ ಗುರುತಿನ ದಾಖಲೆ ಹೊಂದಿರುವ ವ್ಯಕ್ತಿಗಳಿಗೆ ಹೊಸ ಸಿಮ್ ಸಂಪರ್ಕ ನೀಡುವುದನ್ನು ತಡೆಯಲಾಗುತ್ತದೆ. ಇದಲ್ಲದೆ, ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್‌ಗಳು ನೋಂದಣಿಯಾಗಿವೆ ? ಎಂಬುವುದನ್ನು ಸರ್ಕಾರದ ಮಟ್ಟದಲ್ಲಿ ಟ್ರ್ಯಾಕ್ ಮಾಡಲಾಗುತ್ತದೆ. ಸಾಮಾನ್ಯವಾಗಿ ಒಬ್ಬ ವ್ಯಕ್ತಿಗೆ ಗರಿಷ್ಠ 9 ಸಿಮ್ ಕಾರ್ಡ್‌ಗಳನ್ನು ಹೊಂದಲು ಅವಕಾಶವಿರಲಿದೆ. ಆದರೆ ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳಲ್ಲಿ ಗರಿಷ್ಠ 6 ಸಿಮ್ ಕಾರ್ಡ್‌ಗಳ ಮಿತಿ ಇರಲಿದೆ.
ನಕಲಿ ಗುರುತಿನ ಆಧಾರದ ಮೇಲೆ ಸಿಮ್ ಕಾರ್ಡ್ ಪಡೆಯುವುದು, ಸೈಬರ್ ವಂಚನೆ ನಡೆಸುವುದು ಹಾಗೂ ಡಿಜಿಟಲ್ ಅರೆಸ್ಟ್‌ನಂತಹ ವಂಚನೆಗಳಿಗೆ ಬಳಸಲಾಗುವ ನಕಲಿ ಸಂಪರ್ಕ ನಿಯಂತ್ರಿಸುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ.
ಹೊಸ ಸಿಮ್ ಕಾರ್ಡ್ ಖರೀದಿಗೆ ಹೇಗಿದೆ ಟಫ್ ರೂಲ್ಸ್ ?
- ಹೊಸ ಸಿಮ್ ಕಾರ್ಡ್ ನೀಡುವ ಮೊದಲು ರಿಯಲ್‌ಟೈಮ್ ಪರಿಶೀಲನೆ ಕಡ್ಡಾಯವಾಗಲಿದೆ.
- ಟೆಲಿಕಾಂ ಆಪರೇಟರ್‌ಗಳು ಡಿಜಿಟಲ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್ ಮೂಲಕ ಗ್ರಾಹಕರ ವಿವರ ಪರಿಶೀಲಿಸಬೇಕು.
- ಅನುಮಾನಾಸ್ಪದ ಅಥವಾ ನಕಲಿ ಗುರುತಿನ ವ್ಯಕ್ತಿಗಳಿಗೆ ಹೊಸ ಸಿಮ್ ಸಂಪರ್ಕ ಪಡೆಯುವುದನ್ನು ನಿರ್ಬಂಧಿಸಲಾಗುತ್ತದೆ.
- ಪ್ರತಿಯೊಬ್ಬ ವ್ಯಕ್ತಿಯ ಹೆಸರಿನಲ್ಲಿ ನೋಂದಣಿಯಾಗಿರುವ ಸಿಮ್ ಕಾರ್ಡ್‌ಗಳ ಸಂಖ್ಯೆಯನ್ನು ಸರ್ಕಾರ ಟ್ರ್ಯಾಕ್ ಮಾಡಲಿದೆ.
- ಒಬ್ಬ ವ್ಯಕ್ತಿಗೆ ಗರಿಷ್ಠ 9 ಸಿಮ್ ಕಾರ್ಡ್‌ಗಳಿಗೆ ಅವಕಾಶ: ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳಲ್ಲಿ ಈ ಮಿತಿ 6 ಸಿಮ್ ಕಾರ್ಡ್‌ಗಳಿಗೆ ಸೀಮಿತವಾಗಲಿದೆ.
- ನಕಲಿ ಸಿಮ್‌ಗಳು, ಸೈಬರ್ ವಂಚನೆ ಮತ್ತು ಡಿಜಿಟಲ್ ಅರೆಸ್ಟ್ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.