ಕಲಬುರಗಿ: ಕರ್ತವ್ಯ ಲೋಪ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ ಅಮಾನತು

ನಗರದ

ಸುದ್ದಿ ಸಂಗ್ರಹ ಕಲಬುರಗಿ
ನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿ ಕಾಣೆಯಾದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಪೊಲೀಸ್‌ ಕಾನ್‌ಸ್ಟೆಬಲ್‌ಗಳನ್ನು ನಗರ ಪೊಲೀಸ್‌ ಕಮಿಷನರ್‌ ಶರಣಪ್ಪ ಎಸ್‌.ಡಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ನೀಲಕಂಠ ಪಾಟೀಲ ಮತ್ತು ಚಂದ್ರಶೇಖರ ಅಮಾನತುಗೊಂಡವರು.

ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಶಿವಕುಮಾರ ಹೊಸಮನಿ ಜೂನ್ 30ರಂದು ಡಿಎಪಿ ರಸಗೊಬ್ಬರ ತರಲು ಕಲಬುರಗಿ ನಗರಕ್ಕೆ ಬಂದಿದ್ದರು. ರಾತ್ರಿಯಾದರೂ ಮನೆಗೆ ಮರಳಿರಲಿಲ್ಲ. ಕುಟುಂಬಸ್ಥರು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಬಳಿಕ ಶಿವಕುಮಾರ ಶವವಾಗಿ ಪತ್ತೆಯಾಗಿದ್ದರು. ನಂತರ ಕೊಲೆ ಪ್ರಕರಣ ದಾಖಲಾಗಿತ್ತು.

ಈ ಕೊಲೆ ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರೂ ಕಾನ್‌ಸ್ಟೆಬಲ್‌ಗಳ ವಿರುದ್ಧ ಇಲಾಖಾ ಶಿಸ್ತಿನ ಕ್ರಮ ಬಾಕಿ ಇರಿಸಿ, ಅಮಾನತುಗೊಳಿಸಿ ಕಮಿಷನರ್‌ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *