ಶಾಲಾ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ತಾಲೂಕು

ಸುದ್ದಿ ಸಂಗ್ರಹ ಕಾಳಗಿ
ಹಳೆ ಹೆಬ್ಬಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡ ನಿರ್ಮಾಣದ ಸ್ಥಳವನ್ನು ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ
ಗುರುವಾರ ಪರಿಶೀಲಿಸಿದರು.

ತಾಲೂಕಿನ ಹಳೆ ಹೆಬ್ಬಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ 8 ಕೊಠಡಿಗಳ ನಿರ್ಮಾಣ ಕಾರ್ಯಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಟೆಂಡರ್ ಕಾರ್ಯ ಮಾಡಲಾಗಿದೆ, ಹೀಗಾಗಿ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಅವರ ನೇತೃತ್ವದಲ್ಲಿ ಮುಖ್ಯಗುರುಗಳು, ಗುತ್ತಿಗೆದಾರ ಮತ್ತು ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಶಾಲೆಯ ಹಳೆಯ ಕಟ್ಟಡ ನೆಲಸಮ (ಡೆಮಾಲಿಷ್) ಮಾಡಬೇಕು ಮತ್ತು ನೂತನ ಕಟ್ಟಡ ನಿರ್ಮಾಣ ಮಾಡುವಾಗ ಗುಣಮಟ್ಟದಿಂದ ಕಾರ್ಯ ನಿರ್ವಹಿಸಲು ಗುತ್ತಿಗೆದಾರ ಮತ್ತು ಇಂಜಿನಿಯರ್ ಅವರಿಗೆ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಬಾಬರ್ ಪಟೇಲ್, ಕ್ಲಾಸ್-1 ಸಿವಿಲ್ ಗುತ್ತಿಗೆದಾರ ಎಂ‌.ಡಿ ಸಿರಾಜೋದ್ದಿನ್, ಮುಖಂಡ ಬಸವರಾಜ್ ಶಿವಗೋಳ ಮತ್ತು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *