ಯಾದಗಿರಿ: ಭೀಮಾ ನದಿಯಲ್ಲಿ ಸ್ನಾನ ಮಾಡಲು ಹೋದ ಯುವಕ ನಾಪತ್ತೆ

ಜಿಲ್ಲೆ

ಸುದ್ದಿ ಸಂಗ್ರಹ ಯಾದಗಿರಿ
ಭೀಮಾ ನದಿಯಲ್ಲಿ ಸ್ನಾನ ಮಾಡಲು ಹೋದ ಯುವಕ ನಾಪತ್ತೆಯಾಗಿರುವ ಘಟನೆ ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದ ಹೊರಭಾಗದಲ್ಲಿ ನಡೆದಿದೆ.

ರಂಗಯ್ಯ (21) ನಾಪತ್ತೆಯಾದ ಯುವಕ. ಬೆಳೆಗೆ ಕ್ರಿಮಿನಾಶಕ ಸಿಂಪಡಣೆ ಮಾಡಿ ಸ್ನೇಹಿತರ ಜೊತೆ ಸ್ನಾನಕ್ಕೆ ತೆರಳಿದಾಗ ದುರ್ಘಟನೆ ಸಂಭವಿಸಿದೆ. ನಾಲ್ಕು ಜನ ಸ್ನೇಹಿತರು ನದಿಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಕಾಲು ಜಾರಿ ಬಿದ್ದ ಮೂವರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

ನಾಪತ್ತೆಯಾದ ಇನ್ನೋರ್ವ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *