KPSC ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ನಗರದ

ಸುದ್ದಿ ಸಂಗ್ರಹ ಬೆಂಗಳೂರು
ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್‌ ಅವರನ್ನು ಅಮಾನತು ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸಂಪುಟ ಸಭೆ ನಡೆಸಿ ಅಮಾನತಿಗೆ ಸರ್ಕಾರ ಅಧಿಕೃತ ಶಿಫಾರಸು ಮಾಡಿತ್ತು. ರಾಜ್ಯಪಾಲರಿಂದ 2ನೇ ಬಾರಿಗೆ ಅಮಾನತು ಆದೇಶ ಹೊರಬಿದ್ದಿದೆ. ರಾಷ್ಟ್ರಪತಿಗಳು ಮುಂದಿನ ಆದೇಶ ನೀಡುವವರೆಗೂ ಅಮಾನತು ಆದೇಶ ಜಾರಿಯಲ್ಲಿರಲಿದೆ.

ರಾಜ್ಯ ಸಚಿವ ಸಂಪುಟದ ಅನುಮತಿ ಪಡೆಯದೆ ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವುದು ಕಾನೂನುಬಾಹಿರ ಎಂದು ಹೈಕೋರ್ಟ್ ಈ ಹಿಂದೆ ತಿಳಿಸಿತ್ತು.

ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿತ್ತು. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅಧ್ಯಕ್ಷತೆಯಲ್ಲಿ ಆಗಸ್ಟ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಒಪ್ಪಿಗೆ ನೀಡಲಾಗಿತ್ತು.

Leave a Reply

Your email address will not be published. Required fields are marked *