ಮಂತ್ರಾಲಯದಲ್ಲಿ ಸಡಗರ ಸಂಭ್ರಮದಿಂದ ನಡೆದ ಶ್ರೀಕೃಷ್ಣ ಜನ್ಮಾಷ್ಠಮಿ

ಜಿಲ್ಲೆಯ

ಸುದ್ದಿ ಸಂಗ್ರಹ ರಾಯಚೂರು
ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮದಿಂದ ಆಚರಿಸಲಾಗಿದೆ.

ಕೃಷ್ಣನ ಪೂಜೆಗೂ ಮುನ್ನ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಶ್ರೀಗಳ ನೇತೃತ್ವದಲ್ಲಿ ಪಿಂಡ್ಲಿ ಉತ್ಸವ ಸಡಗರ ಸಂಭ್ರಮದಿಂದ ನೆರವೇರಿತು.

ಸ್ವತಃ ಸುಬುಧೇಂದ್ರ ತೀರ್ಥ ಶ್ರೀಗಳು ಪಿಂಡ್ಲಿ ಉತ್ಸವದಲ್ಲಿ ಪಾಲ್ಗೊಂಡು ಮೊಸರು, ಹಾಲು, ಬೆಣ್ಣೆ ತುಂಬಿದ ಮಡಿಕೆಯನ್ನು ಒಡೆದರು. ಉತ್ಸವದಲ್ಲಿ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳು ಮತ್ತು ಮಠದ ಸಿಬ್ಬಂದಿ, ಭಕ್ತರು ಭಾಗವಹಿಸಿದ್ದರು.

ವಿದ್ಯಾರ್ಥಿಗಳು ನಿರಂತರ ಎರಚುವ ಓಕಳಿ ಮಧ್ಯೆಯೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಬಳಿಕ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿಶೇಷ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಯಿತು‌.

Leave a Reply

Your email address will not be published. Required fields are marked *