ಸುದ್ದಿ ಸಂಗ್ರಹ

ಪರಿಸರ ರಕ್ಷಣೆಗೆ ಪರಿಸರ ಸ್ನೇಹಿ ಗಣೇಶನ ಜಾಗೃತಿ ಮೂಡಿಸಿ : ಸಿದ್ದಲಿಂಗ ಶ್ರೀ.

ಪ್ರಕೃತಿಯ ಜಲಮೂಲಗಳನ್ನು ಪರಿಸರಕ್ಕೆ ಹಾನಿ ಉಂಟು ಮಾಡುವ ರಾಸಾಯನಿಕ ವಸ್ತುಗಳ್ಳನ್ನು ಬಳಸಿ ಪರಿಸರವನ್ನು ನಾಶವಾಡುತ್ತಿದ್ದೇವೆ. ಜನಸಾಮಾನ್ಯರು ಮನೆಮನೆಗಳಲ್ಲಿ ಪರಿಸರಸ್ನೇಹಿ ಗಣೇಶನನ್ನು ಪ್ರತಿಷ್ಟಾಪಿಸುವ ಮೂಲಕ ಪರಿಸರ ರಕ್ಷಣೆಯ ಜಾಗೃತಿಯನ್ನು ಮೂಡಿಸುವ ಅಗತ್ಯವಿದೆ ಎಂದು ರಾವೂರ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಸಿದ್ದಲಿಂಗ ಸ್ವಾಮಿಗಳು ಹೇಳಿದರು.
ಅವರು ರಾವೂರ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಮಕ್ಕಳಿಂದ ಹಮ್ಮಿಕೊಂಡಿದ್ದ ಪರಿಸರಸ್ನೇಹಿ ಗಣೇಶ ತಯಾರಿಸುವ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ಮಾಡುವ ದೈತ್ಯಕಾರದ ಗಣೇಶನ ವಿಗ್ರಹಗಳು ನೀರಿನಲ್ಲಿ ಕರಗುವುದಿಲ್ಲ ಬದಲಾಗಿ ರಾಸಾಯನಿಕಗಳಿಂದ ತುಂಬಿ ನೀರನ್ನು ಮಲಿನಮಾಡುತ್ತವೆ. ಗಣೇಶ ಚತುರ್ಥಿಯನ್ನು ಅತ್ಯಂತ ಶೃದ್ದಾ ಭಕ್ತಿಯಿಂದ ಆಚರಣೆಯನ್ನು ಮಾಡುವುದರ ಜೊತೆಗೆ ಪರಿಸರಕ್ಕೆ ಹಾನಿ ಮಾಡದ ಮಣ್ಣಿನ ಗಣಪತಿ ವಿಗ್ರಹಗಳನ್ನು ಪೂಜಿಸಿದರೆ ಪರಿಸರವೂ ಉಳಿಯುತ್ತದೆ. ಹಬ್ಬವೂ ಆಚರಣೆ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಇದರ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು. 50ಕ್ಕೂ ಹೆಚ್ಚು ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಉತ್ತಮ ವಿಗ್ರಹ ಮಾಡಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಸ್ಪರ್ಧೆಯ ಸಂಯೋಜಕರಾದ ಸಿದ್ದಲಿಂಗ ಬಾಳಿ. ಶಿಕ್ಷಕರಾದ ಈಶ್ವರಗೌಡ ಪಾಟೀಲ್, ವಿಜಯಲಕ್ಷ್ಮಿ ಬಮ್ಮನಳ್ಳಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *