ಪಿಯುಸಿ ಪರೀಕ್ಷಾ ಶುಲ್ಕ ಶೇ.50ರಷ್ಟು ಹೆಚ್ಚಳ, ಯಾವುದು ಎಷ್ಟು ಏರಿಕೆ ?

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ಎಸ್‌ಎಸ್‌ಎಲ್‌ಸಿ ಶುಲ್ಕ ಪರಿಷ್ಕರಣೆಯ ಬೆನ್ನಲ್ಲೆ ರಾಜ್ಯ ಸರ್ಕಾರವು ಪದವಿ ಪೂರ್ವ ವಿದ್ಯಾರ್ಥಿಗಳಿಗೂ ಶುಲ್ಕ ಹೆಚ್ಚಳದ ಶಾಕ್ ನೀಡಿದೆ.

ಪರೀಕ್ಷಾ ಶುಲ್ಕ ಸೇರಿದಂತೆ ಒಟ್ಟು 26 ಬಗೆಯ ವಿವಿಧ ಸೇವೆಗಳ ದರವನ್ನು ಶೇ.50ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಪರಿಷ್ಕೃತ ದರಗಳು 2026-27ನೇ ಶೈಕ್ಷಣಿಕ ಸಾಲಿನಿಂದಲೆ ಅನ್ವಯವಾಗಲಿವೆ.

ಕಳೆದ 8 ವರ್ಷಗಳಿಂದ ಯಾವುದೆ ಶುಲ್ಕ ಏರಿಕೆ ಮಾಡಿರದ ಕಾರಣ ಪ್ರಸ್ತುತ ದರ ಪರಿಷ್ಕರಣೆ ಅನಿವಾರ್ಯ ಎಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.

ಶೈಕ್ಷಣಿಕ ವೆಚ್ಚಗಳು, ಮುದ್ರಣ ಮತ್ತು ಪರೀಕ್ಷಾ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ. ಆದಾಗ್ಯೂ, ಏಕಾಏಕಿ ಶೇ.50ರಷ್ಟು ಶುಲ್ಕ ಹೆಚ್ಚಳ ಮಾಡಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರ ಆರ್ಥಿಕ ಹೊರೆ ಹೆಚ್ಚಿಸಲಿದೆ ಎಂಬ ಆಕ್ಷೇಪಗಳು ವ್ಯಕ್ತವಾಗಿವೆ.

Leave a Reply

Your email address will not be published. Required fields are marked *