ಯುವ ಪತ್ರಕರ್ತರ ಮೇಲಿನ ಹಲ್ಲೆಗೆ ಖಂಡನೆ

ಪಟ್ಟಣದ

ಸುದ್ದಿ ಸಂಗ್ರಹ ಚಿತ್ತಾಪುರ
ದೆಹಲಿಯ ಜಂತರ ಮಂತರ್’ನಲ್ಲಿ ವೃತ್ತಿನಿರತ ಯುವ ಪತ್ರಕರ್ತರ ಮೇಲೆ ಹಲ್ಲೆ ಜತೆಗೆ ದೌರ್ಜನ್ಯ ನಡೆಸಿರುವುದು ಅತ್ಯಂತ ಖಂಡನಿಯವಾಗಿದ್ದು ಕೂಡಲೆ ತಪ್ಪಿತಸ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ತಾಪುರ ತಾಲೂಕು ಸಮಿತಿ ಒತ್ತಾಯಿಸಿದೆ.

ಈ ಕುರಿತು ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ತಾಲೂಕು ಅಧ್ಯಕ್ಷ ಸಿದ್ದರಾಜ ಮಲ್ಕಂಡಿ, ಅಕ್ಟೋಬ‌ರ್ 3ರಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾ‌ರ್ ಅವರ ರಾಜೀನಾಮೆಗೆ ಒತ್ತಾಯಿಸಿ ಜಂತ‌ರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ದೆಹಲಿ ಪೊಲೀಸ್‌ ಸಿಬ್ಬಂದಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮೂವರು ಯುವ ಪತ್ರಕರ್ತೆಯರು ದೂರು ನೀಡಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.

ಪ್ರತಿಭಟನೆಯ ವರದಿಗೆ ತೆರಳಿದ್ದ ಯುವ ಪತ್ರಕರ್ತರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ಘಟನೆ ಖಂಡಿಸಿ ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಹಲವು ಪ್ರತಿಭಟನೆಕಾರರನ್ನು ಬಂಧಿಸಿರುವುದು ಖಂಡನಿಯವಾಗಿದೆ.

ಪತ್ರಕರ್ತರಿಗೆ ಮುಕ್ತವಾಗಿ ಹಾಗೂ ಭಯಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವ ಅವಕಾಶ ಕಲ್ಪಿಸುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಸಂಘ ತಿಳಿಸಿದ್ದು, ಪತ್ರಕರ್ತರ ಮೇಲೆ ಹಲ್ಲೆ ನಡೆಸಿದವರು ಹಾಗೂ ಮಹಿಳಾ ಪತ್ರಕರ್ತೆಗೆ ಕಿರುಕುಳ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಪತ್ರಕರ್ತರಿಗೆ ಅಗತ್ಯ ಭದ್ರತೆ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸಿದೆ.

Leave a Reply

Your email address will not be published. Required fields are marked *