ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ: ಅ.15 ಕೊನೆ ದಿನ

ನಗರದ

ಸುದ್ದಿ ಸಂಗ್ರಹ ಕಲಬುರಗಿ
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದಿಂದ ಕೊಡಮಾಡುವ ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ಅರ್ಹ ಅಧಿಕಾರಿ, ನೌಕರರಿಂದ ಅರ್ಜಿ ಆಹ್ವಾನಿಸಲಾಗಿದೆ, ಅಕ್ಟೋಬರ್ 15 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ತವ್ಯನಿಷ್ಠೆ, ಗುಣಮಟ್ಟದ ಹಾಗೂ ಪ್ರಾಮಾಣಿಕ ಸೇವೆ, ಸಾರ್ವಜನಿಕರಿಗೆ ಸ್ಪಂದನೆ, ಸೇವಾವಧಿಯಲ್ಲಿನ ಗಮನಾರ್ಹ ಸಾಧನೆ, ಸಾರ್ವಜನಿಕ ಹಿತಕ್ಕಾಗಿ ಕೈಗೊಂಡ ವಿಶೇಷ ಕಾರ್ಯಗಳು, ಕಚೇರಿ ಕಾರ್ಯಕ್ರಮತೆ, ಸಮಯಪಾಲನೆ, ಹೊಸ ಆಲೋಚನೆ ಮತ್ತು ಸರಳೀಕರಣದ ಪ್ರಯತ್ನಗಳು ಪ್ರಶಸ್ತಿ ಆಯ್ಕೆಯ ಮಾನದಂಡಗಳಾಗಿ ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಖಾಯಂ ನೌಕರರು ಪ್ರಶಸ್ತಿಗೆ ನಾಮ ನಿರ್ದೇಶನಗೊಳ್ಳಲು ಅರ್ಹರಾಗಿರುತ್ತಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಪ್ರತಿ ವರ್ಷ 200 ರೂ ಸದಸ್ಯತ್ವ ಶುಲ್ಕ ಪಾವತಿಸಿರುವ ಜಿಲ್ಲೆಯ ತಾಲೂಕಿನ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ-ನೌಕರರು ಅರ್ಹರಾಗಿರುತ್ತಾರೆ. ಸರ್ಕಾರಿ ಸೇವೆಗೆ ಸೇರ್ಪಡೆಗೊಂಡು ಕನಿಷ್ಠ 5 ವರ್ಷಗಳ ಸೇವೆ ಪೂರ್ಣಗೊಳಿಸಿರುವುದು ಕಡ್ಡಾಯವಾಗಿದೆ. ಅರ್ಹ ಅಧಿಕಾರಿ, ನೌಕರರು ಪ್ರಶಸ್ತಿಗೆ ಸ್ವತಃ ಅರ್ಜಿ ಸಲ್ಲಿಸುವಂತಿಲ್ಲ. ಇಲಾಖಾ ಮುಖ್ಯಸ್ಥರು, ಮೇಲಾಧಿಕಾರಿಗಳು, ಸಹೋದ್ಯೋಗಿಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮತ್ತು ತಾಲೂಕು ಶಾಖೆಗಳ ಅಧ್ಯಕ್ಷರು, ಪದಾಧಿಕಾರಿಗಳು ಅರ್ಹ ನೌಕರರು ಪ್ರಶಸ್ತಿಗೆ ಅರ್ಜಿ ಸಲ್ಲಿಸಲು POWERMEDIA.INFO ಮೂಲಕ ನಾಮನಿರ್ದೇಶನ ಮಾಡಬಹುದಾಗಿದೆ ಎಂದರು.

ಹೆಚ್ಚಿನ ಮಾಹಿತಿಗಾಗಿ ಸಂಘದ ಜಿಲ್ಲಾ ಕಾರ್ಯದರ್ಶಿ ಚಂದ್ರಕಾಂತ ಏರಿ ಅವರ ಮೊ. 9448651088 ನಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *