ಸುದ್ದಿ ಸಂಗ್ರಹ

ವಾಡಿ: ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮನವಿ….ಸುದ್ದಿ ಸಂಗ್ರಹ ವಾಡಿ
ಪಟ್ಟಣದಲ್ಲಿ ದಿನೇ ದಿನೆ ಹದಗೆಡುತ್ತಿರುವ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಬೇಕು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ……​ಪಟ್ಟಣದಲ್ಲಿ 3-4 ದಿನಗಳಿಗೊಮ್ಮೆ ಅಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಪ್ರತಿದಿನ ಶುದ್ಧವಾದ ಕುಡಿಯುವ ನೀರು ಪೂರೈಕೆ ಮಾಡಬೇಕು, ಪುರಸಭೆಯ ವಿವಿಧ ಯೋಜನೆಗಳ ದುರ್ಬಳಕೆ ತಕ್ಷಣ ತಡೆಯಬೇಕು, ಸಾರ್ವಜನಿಕ ಶೌಚಾಲಯ, ಬಸ್ ನಿಲ್ದಾಣ, ಪ್ರತ್ಯೇಕ ತರಕಾರಿ ಮತ್ತು ಮಾಂಸದ ಮಾರುಕಟ್ಟೆ ನಿರ್ಮಾಣ ಹಾಗೂ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದರು……ಕಳೆದ 8-10 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಎಪಿಎಂಸಿ ಮಾರುಕಟ್ಟೆ ತಕ್ಷಣ ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು, ತ್ಯಾಜ್ಯ ಸಂಸ್ಕರಣಾ ಘಟಕದ ಸೂಕ್ತ ನಿರ್ವಹಣೆ, ಪ್ರತಿ 3 ತಿಂಗಳಿಗೊಮ್ಮೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಬೇಕು ಎಂದು ಪಟ್ಟಣದ ಜನರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರದ ಮೂಲಕ ಒತ್ತಾಯಿದ್ದಾರೆ.

Leave a Reply

Your email address will not be published. Required fields are marked *