ಸುದ್ದಿ ಸಂಗ್ರಹ ಬೆಂಗಳೂರು
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೊನೆಗೂ ಮೂಹುರ್ತ ಕೂಡಿ ಬಂದಂತೆ ಕಾಣುತ್ತಿದೆ. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಸ್ಥಳೀಯ ಸಂಸ್ಥೆ ಚುನಾವಣೆಗಳ ಬಗ್ಗೆ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ.
ಜನವರಿ 2ನೇ ವಾರದಲ್ಲಿ ಚುನಾವಣೆ ನಡೆಸಲು ಸಂಪುಟ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗುತ್ತಿದೆ. ಡಿ.14ರ ಬಳಿಕ ಚುನಾವಣೆಗೆ ಅಧಿಕೃತ ನೋಟಿಫಿಕೇಷನ್ ಹೊರಡಿಸುವ ಸಾಧ್ಯತೆ ಇದೆ.
ಈ ಹಿನ್ನೆಲೆ ನವೆಂಬರ್ 30 ರಿಂದ ಡಿಸೆಂಬರ್ 11ರ ವರೆಗೆ ಬೆಳಗಾವಿ ಅಧಿವೇಶನ ನಡೆಸಲು ನಿರ್ಧಾರ. ಈ ಹಿಂದೆ ಡಿಸೆಂಬರ್ 7 ರಿಂದ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಸ್ಥಳಿಯ ಸಂಸ್ಥೆ ಚುನಾವಣೆ ನಡೆಸಲು ನೋಟಿಫಿಕೇಷನ್ ಹೊರಡಿಸಬೇಕು ಎಂಬ ಕಾರಣಕ್ಕೆ ಒಂದು ವಾರ ಮುಂಚಿತವಾಗಿಯೇ ಅಧಿವೇಶನ ನಡೆಸಲು ಸರ್ಕಾರದ ತಿರ್ಮಾನಿಸಿದೆ ಎನ್ನಲಾಗಿದೆ.