ಸುದ್ದಿ ಸಂಗ್ರಹ ಬೆಂಗಳೂರು
ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಪ್ರಥಮ ದರ್ಜೆ ಸಹಾಯಕರು (FDA) ಹಾಗೂ ದ್ವೀತಿಯ ದರ್ಜೆ ಸಹಾಯಕರ (SDA) ಹುದ್ದೆಗಳ ನೇಮಕಾತಿಗೆ ಕೆಇಎ ಗುರುವಾರ ಅಧಿಸೂಚನೆ ಹೊರಡಿಸಿದೆ.
ಅಕ್ಟೋಬರ್ 30 ರಿಂದ (ಇವತ್ತಿನಿಂದ) ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ನ.26 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ.
ಉಳಿಕ ಮೂಲ ವೃಂದಕ್ಕೆ ಸಂಬಂಧಿಸಿದಂತೆ 2,163 FDC ಹಾಗೂ 2,070 SDC ಮತ್ತು ಕಲ್ಯಾಣ ಕರ್ನಾಟಕ ವೃಂದದ 563 FDC ಹಾಗೂ 635 FDC ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ.
ಪರೀಕ್ಷೆಗಳನ್ನ 2027ರ ಜನವರಿ 8, 9 , 10, 16 ಮತ್ತು 17ರಂದು ನಡೆಸುವುದಾಗಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ KEA ವೆಬ್ ಸೈಟ್‌ನಲ್ಲಿ ಪರಿಶೀಲಿಸಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.