ಇಂದು ಮಧ್ಯರಾತ್ರಿಯಿಂದಲೇ ಬಸ್‌ ದರ ಏರಿಕೆ

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ಇಂದು ಮಧ್ಯರಾತ್ರಿಯಿಂದಲೇ ಕರ್ನಾಟಕದಲ್ಲಿ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ನಾಲ್ಕೂ ಸರ್ಕಾರಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳವಾಗಲಿದೆ.

ಸಾಮಾನ್ಯ ಬಸ್ ಗಳಲ್ಲಿ ಗರಿಷ್ಠ ಪ್ರಯಾಣ ದರ 9 ರೂ ಹೆಚ್ಚಳವಾಗಲಿದೆ. ಸಾರಿಗೆ ಸಚಿವ ಬೈರತಿ ಸುರೇಶ್‌ ಅವರು ಸುದ್ದಿಗೋಷ್ಠಿ ನಡೆಸಿ , ಡೀಸೆಲ್‌ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಯಾಣ ದರ ಏರಿಕೆ ಅನಿವಾರ್ಯ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಸಾಮಾನ್ಯ ಬಸ್ ಸೇವೆಗಳು
ಹತ್ತಿರದ ಪ್ರಯಾಣ: 2 ಕಿ.ಮೀ ವರೆಗಿನ ಪ್ರಯಾಣಕ್ಕೆ 4 ರೂ, 2 ಕಿ.ಮೀ ನಿಂದ 4 ಕಿ.ಮೀ ವರೆಗಿನ ಪ್ರಯಾಣಕ್ಕೆ 6 ರೂ. ಹೆಚ್ಚಳ ಮಾಡಲಾಗಿದೆ.

Leave a Reply

Your email address will not be published. Required fields are marked *